ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ!

ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ!

ಬೆಂಗಳೂರು, ಜೂ. 15: ಕಾಂಗ್ರೆಸ್ ರಾಜ್ಯದಲ್ಲಿ 2019ರ ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲನ್ನು ಅನುಭವಿಸಿದೆ. ಈ ಹೀನಾಯ ಸೋಲನ ಹೊಣೆ ಹೊತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ.

ಗಾಂಧಿನಗರ ಶಾಸಕ ಹಾಗೂ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ದಿನೇಶ್ ಗುಂಡೂರಾವ್ ಅವರನ್ನು ಕಳೆದ ರಾಜ್ಯ ವಿಧಾನಸಭಾ ಚುನಾವಣೆಯ ನಂತರ ಜಿ.ಪರಮೇಶ್ವರ್ ಅವರಿಂದ ತೆರವಾದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ 2018 ರ ಜುಲೈ 4 ರಂದು ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.

 

ಫ್ರೆಶ್ ನ್ಯೂಸ್

Latest Posts

Featured Videos