ರಾಹುಲ್ ಗಾಂಧಿ `ಕರ್ನಾಟಕ’ದಿಂದ ಸ್ಪರ್ಧೆ ಮಾಡಲಿ: ದಿನೇಶ್ ಗುಂಡೂರಾವ್

ರಾಹುಲ್ ಗಾಂಧಿ `ಕರ್ನಾಟಕ’ದಿಂದ ಸ್ಪರ್ಧೆ ಮಾಡಲಿ: ದಿನೇಶ್ ಗುಂಡೂರಾವ್

ಚಾಮರಾಜನಗರ, ಮಾ.15, ನ್ಯೂಸ್ ಎಕ್ಸ್ ಪ್ರೆಸ್: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಹ್ವಾನ ಕೊಟ್ಟಿದ್ದಾರೆ.

ಚಾಮರಾಜನಗರದಲ್ಲಿ ನಡೆದ ಕಾಂಗ್ರೆಸ್ ಪರಿವರ್ತನಾ ಯಾತ್ರೆಯ ಬಳಿಕ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಕೇವಲ ಉತ್ತರ ಭಾರತದಿಂದ ಮಾತ್ರ ಸ್ಪರ್ಧೆ ಮಾಡುವುದಲ್ಲ, ದಕ್ಷಿಣ ಭಾರತದಿಂದಲೂ ಸ್ಪರ್ಧೆ ಮಾಡಲಿ, ಅದರಲ್ಲೂ ಕರ್ನಾಟಕದಿಂದಲೇ ಸ್ಪರ್ಧೆ ಮಾಡಲಿ ಎಂದು ಆಹ್ವಾನಿಸಿದ್ದಾರೆ.

ಮೋದಿ ಐದು ವರ್ಷಗಳ ಸಾಧನೆ ಶೂನ್ಯವಾಗಿದೆ. ಮೋದಿ ಕೇವಲ ಭಾಷಣ ಮತ್ತು ಪ್ರಚಾರ ಮಾಡುತ್ತಿದ್ದಾರೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಕಪ್ಪು ಹಣ ತರುವುದಾಗಿ ಹೇಳಿ ಜನರಿಗೆ ಮೋಸ ಮಾಡಿದ್ದಾರೆ. ಮೋದಿಯನ್ನು ಯಾವುದೇ ಕಾರಣಕ್ಕೂ ಪ್ರಶ್ನೆ ಮಾಡುವಂತಿಲ್ಲ, ಏಕೆಂದರೆ ಪ್ರಶ್ನೆ ಮಾಡಿದರೆ ದೇಶ ದ್ರೋಹಿಗಳು ಎಂದು ಹೇಳುತ್ತಿದ್ದಾರೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos