ಸಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಸಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು,ಡಿ. 15 : 5 ದಿನಗಳ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಲ್ಲೇಶ್ವರಂ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸದ್ಯ ಸಿದ್ದರಾಮಯ್ಯಗೆ 1 ವಾರ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚನೆ ನೀಡಿದ್ದಾರೆ. 5 ದಿನಗಳ ಬಳಿಕ ಆಸ್ಪತ್ರೆಯಿಂದ ಸಿದ್ದರಾಮಯ್ಯ ಡಿಸ್ಚಾರ್ಜ್ ಆಗಿದ್ದಾರೆ. ಮಲ್ಲೇಶ್ವರಂ ಖಾಸಗಿ ಆಸ್ಪತ್ರೆಯಿಂದ ಸಿದ್ದರಾಮಯ್ಯ ಅವರು ನಿವಾಸಕ್ಕೆ ತೆರಳಿದ್ದಾರೆ. ಸಿದ್ದರಾಮಯ್ಯ ಅವರು ಆಸ್ಪತ್ರೆಯಿಂದ ತೆರಳುವ ವೇಳೆ ‘ಹೌದು ಹುಲಿಯಾ’ ಎಂದು ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಸಿದ್ದರಾಮಯ್ಯ ಅವರಿಗೆ ಜೈಕಾರ ಹಾಕಿದ ಪ್ರಸಂಗ ನಡೆಯಿತು.

ಡಿಸಾರ್ಜ್ ಬಳಿಕ ಸುದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ರಕ್ತನಾಳದಲ್ಲಿ ಬ್ಲಾಕ್ ಆಗಿತ್ತು, ವೈದ್ಯರು ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ಮಾಡಿದ್ದಾರೆ. ವೈದ್ಯರು ಚೆನ್ನಾಗಿ ನೋಡಿಕೊಂಡಿದ್ದಾರೆ, ಎಲ್ಲರಿಗೂ ಧನ್ಯವಾದ. ನಾನು ಈಗ ನಾರ್ಮಲ್ ಆಗಿದ್ದೇನೆ. ನನ್ನ ಅಭಿಮಾನಿಗಳು, ಕಾರ್ಯಕರ್ತರಿಗೆ ಋಣಿಯಾಗಿದ್ದೇನೆ ಎಂದು ಕೃತಜ್ಞತೆ ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos