ಆಟೋ-ಕ್ಯಾಬ್ ಚಾಲಕರಿಗೆ ಆಹಾರ ಧಾನ್ಯ ಕಿಟ್ ವಿತರಣೆ

ಆಟೋ-ಕ್ಯಾಬ್ ಚಾಲಕರಿಗೆ ಆಹಾರ ಧಾನ್ಯ ಕಿಟ್ ವಿತರಣೆ

ಬೆಂಗಳೂರು: ಬೊಮ್ಮನಹಳ್ಳಿ ವಾರ್ಡಿನ ವಿವಿಧ ಬಡಾವಣೆಗಳಲ್ಲಿ ಶುಕ್ರವಾರ ಆಟೋ-ಕ್ಯಾಬ್ ಚಾಲಕರಿಗೆ ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಆಹಾರ ಧಾನ್ಯ ಕಿಟ್ ವಿತರಿಸಲಾಯಿತು.

ಶಾಸಕ ಸತೀಶ್ ರೆಡ್ಡಿ ಮನೆ-ಮನೆಗಳಿಗೆ ತೆರಳಿ ಸಾರ್ವಜನಿಕರ ಅಹವಾಲು ಕೇಳುವ ಜೊತೆಗೆ ಆಹಾರ ಧಾನ್ಯ ಕಿಟ್ ವಿತರಿಸಿದರು. ಲಾಕ್ ಡೌನ್‌ನಿಂದಾಗಿ ಕೆಲಸವಿಲ್ಲದೇ ಆದಾಯ ನಷ್ಟ ಅನುಭವಿಸುತ್ತಿರುವ ಬೀದಿ ಬದಿ ವ್ಯಾಪಾರಿಗಳು ಹಾಗು ಆಟೋ ಮತ್ತು ಕ್ಯಾಬ್ ಚಾಲಕರಿಗೆ ಶಾಸಕರು ಧೈರ್ಯ ತುಂಬಿದರು.

ಆಟೋ ಮತ್ತು ಕ್ಯಾಬ್ ಚಾಲಕರು ಸದಾ ಒತ್ತಡದ ಸ್ಥಿತಿಯಲ್ಲಿರುತ್ತಾರೆ. ಬಹುತೇಕರು ವಾಹನದ ಮೇಲೆ ಸಾಲ ಪಡೆದು, ನಿತ್ಯದ ದುಡಿಮೆಯಿಂದ ಬರುವ ಆದಾಯದಲ್ಲಿ ಸಾಲವನ್ನೂ ತೀರಿಸುತ್ತಾ, ಸಂಸಾರದ ನೊಗವನ್ನೂ ಹೊತ್ತು ಸಾಗುವುದು ಸುಲಭದ ಮಾತಲ್ಲ. ಸರ್ಕಾರ ಘೋಷಿಸಿರುವ ಪರಿಹಾರ ಅವರ ಬದುಕಿಗೆ ಅಲ್ಪ ನೆರವಾಗಿದೆ.

ಹೀಗಾಗಿಯೇ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಚಾಲಕರು ಹಾಗು ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಿ ಅವರಿಗೆ ನೆರವಾಗುವ ಕೆಲಸ ಮಾಡುತ್ತಿದ್ದೇವೆ ಎಂದು ಶಾಸಕ ಸತೀಶ್ ರೆಡ್ಡಿ ಹೇಳಿದರು. ಮಾಜಿ ಉಪ ಮೇಯರ್ ರಾಮಮೋಹನ್ ರಾಜು, ಬಿಜೆಪಿ ಮುಖಂಡರಾದ ಪ್ರವೀಣ್ ರೆಡ್ಡಿ, ಶ್ರೀನಿವಾಸ ರೆಡ್ಡಿ ಇದ್ದರು.

ಫ್ರೆಶ್ ನ್ಯೂಸ್

Latest Posts

Featured Videos