ಶಾಲಾಮಕ್ಕಳಿಗೆ ಸಿಹಿ ವಿತರಣೆ

ಶಾಲಾಮಕ್ಕಳಿಗೆ ಸಿಹಿ ವಿತರಣೆ

ಬೆಂಗಳೂರು: ರಾಜ್ಯದಲ್ಲಿರುವ ಸರ್ಕಾರಿ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಮಧ್ಯಾಹ್ನದ ಊಟ ಕೊಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.

ಈಗಾಗಲೇ ಇದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿದ್ದು, ಸಿದ್ದರಾಮಯ್ಯ ಅವರು ಈ ಬಗ್ಗೆ ಒಪ್ಪಿಗೆ ನೀಡುವುದೊಂದೇ ಬಾಕಿ ಇದೆ ಎಂದು ಶಿಕ್ಷಣ ಸಚಿವರಾಗಿರುವಂತಹ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನ ಬಿಸಿಯೂಟ ಮುಂದುವರೆಸಲು ಅನುಮೋದನೆ ಪಡೆದ ಬಳಿಕ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನದ ಬಿಸಿಯೂಟ ಮುಂದುವರೆಸಲು ಚಿಂತನೆ ನಡೆದಿದೆ. ಈ ಬಗ್ಗೆ ಚರ್ಚಿಸಲಾಗುತ್ತೆ ಎಂದರು.

ಈ ಹಿಂದೆ 8ನೇ ತರಗತಿವರೆಗೆ ಶಾಲಾ ಮಕ್ಕಳಿಗೆ ವಾರದಲ್ಲಿ ಒಮ್ಮೆ ಮೊಟ್ಟೆ ನೀಡಲಾಗುತ್ತಿತ್ತು, ನಮ್ಮ ಸರ್ಕಾರ ಬಂದ ನಂತರ ವಾರದಲ್ಲಿ 2 ಬಾರಿ ಮೊಟ್ಟೆ ನೀಡಲಾಗುತ್ತಿದ್ದು, ಇದನ್ನು 10ನೇ ತರಗತಿವರೆಗೆ ವಿಸ್ತರಿಸಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ ನೀಡುವತ್ತ ಗಮನ ಹರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos