ವೋಟ್‌ ಮಾಡಿದ ಡಿಕೆ ಸಹೋದರರು

ವೋಟ್‌ ಮಾಡಿದ ಡಿಕೆ ಸಹೋದರರು

ಬೆಂಗಳೂರು: ಲೋಕಸಭೆ ಚುನಾವಣೆ 2024ರ ಮೊದಲನೇ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ನಗರ ಸೇರಿ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ಜಿಲ್ಲೆಯ ಕನಕಪುರದಲ್ಲಿ ಲೋಕಸಭಾ ಚುನಾವಣೆ ಬಿರುಸಿನ ಮತದಾನ ನಡೆಯುತ್ತಿದೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿ.ಕೆ ಸುರೇಶ್ ತಮ್ಮ ಹಕ್ಕು ಚಲಾಯಿಸಿದ್ದಾರೆ.

ಇಂದು ಕನಕಪುರದ ದೊಡ್ಡಆಲನಹಳ್ಳಿಯ ಮತಗಟ್ಟೆಗೆ ತೆರಳಿದಂತ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಸಂಸದ ಡಿ ಕೆ ಸುರೇಶ್ ಅವರು ಮತ ಚಲಾಯಿಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ಪ್ರಜಾಪ್ರಭುತ್ವದ ಹಬ್ಬ ಹಾಗಾಗಿ ಎಲ್ಲರೂ ತಪ್ಪದೇ ಮತದಾನ ಮಾಡಿ ನಿಮ್ಮ ಹಕ್ಕನ್ನು ನೀವು ಚಲಾಯಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos