ಡಿ.ಕೆ ಶಿವಕುಮಾರ್ ವಿರುದ್ದ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಡಿ.ಕೆ ಶಿವಕುಮಾರ್ ವಿರುದ್ದ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು ರಾಜ್ಯದೆಲ್ಲಡೆ ಅಭ್ಯರ್ಥಿಗಳು ಭರ್ಜರಿ ಮತ ಬೇಟೆಯಾಚಿಸುತ್ತಿದ್ದಾರೆ ದೊಡ್ಡ ದೊಡ್ಡ ಮುಖಂಡರು ಅಭ್ಯರ್ಥಿಗಳ ಪರ ಮತ ಯಾಚಿಸುತ್ತಿದ್ದಾರೆ. ಜಾತಿ ಹೆಸರು ಹೇಳಿ ಮತದಾರರ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪಿಸಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ದ  ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಬಿಜೆಪಿ ಶಾಸಕ ಸಿಎನ್ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಚುನಾವಣಾ ಆಯೋಗಕ್ಕೆ  ದೂರು ಸಲ್ಲಿಸಲಾಗಿದೆ. ಜಾತಿ ಹೆಸರು ಹೇಳೀ ಮತದಾರರ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಜೊತೆಗೆ ಕಾಂಗ್ರೆಸ್ ನಿಂದ ಗ್ಯಾರಂಟಿ ಕಾರ್ಡ್ ಹಂಚಿಕೆ ಬಗ್ಗೆಯೂ ಕೂಡ ಬಿಜೆಪಿ ನಾಯಕರು ದೂರು ನೀಡಿದ್ದಾರೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos