HDK ವಿರುದ್ದ ವಾಗ್ದಾಳಿ ಮಾಡಿದ ಡಿ‌.ಕೆ.ಶಿವಕುಮಾರ್

HDK ವಿರುದ್ದ ವಾಗ್ದಾಳಿ ಮಾಡಿದ ಡಿ‌.ಕೆ.ಶಿವಕುಮಾರ್

ಬೆಂಗಳೂರು: ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ ಹೇಳಿ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು ಏನನ್ನು ಹಂಚುತ್ತಿದ್ದಾರೆ ಎಂದು ತೋರಿಸಲೆ. ಅವರು ಸತ್ಯ ಹರಿಶ್ಚಂದ್ರನ ಮೊಮ್ಮಗ. ನಾನೇನು ಎನ್ನುವುದು ಜನಕ್ಕೆ ಗೊತ್ತಿದೆ. ನಾನು ಕಂಡಿತವಾಗಿಯೂ ಸತ್ಯ ಹರಿಶ್ಚಂದ್ರ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಿಡಿಕಾರಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಕೂಪನ್ ಕಾರ್ಡ್ ಗಳನ್ನು ಹಂಚುತ್ತಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ಅವರು ತಿರುಗೇಟು ಕೊಟ್ಟಿದ್ದು ಕೊಟ್ಟಿದ್ದಾರೆ. ಮುನಿರತ್ನ, ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಹಂಚುತ್ತಿದ್ದಾರೆ. ನಾವು ಹಂಚುತ್ತಿರುವುದು ನಮ್ಮ ಪ್ರಣಾಳಿಕೆ ಕಾರ್ಡ್” ಎಂದರು.

“ಇಷ್ಟಾದರೂ ಭಯ ಬಂದಿದೆಯಲ್ಲ. ಹೆದರಿಕೊಂಡು ರಣ ಹೇಡಿತರ ಬೇರೆ ಕಡೆ ಹೋಗಿದ್ದಾರೆ‌. ಅವರೇ ಚುನಾವಣೆಗೆ ನಿಂತುಕೊಳ್ಳಬೇಕಿತ್ತು. ಅಮಾಯಕರನ್ನು ನಿಲ್ಲಿಸಿ ಮಂಡ್ಯಕ್ಕೆ ಓಡಿ ಹೋಗಿದ್ದಾರೆ.  ಕುಮಾರಸ್ವಾಮಿ ಏನೇನು ಮಾಡುತ್ತಿದ್ದಾರೆ, ಏನೇನು ಹಂಚುತ್ತಿದ್ದಾರೆ ಎನ್ನುವುದು ನಮಗೆ ಗೊತ್ತಿಲ್ಲವೇ? ಮುನಿರತ್ನನ ಮೂಲಕ ಗೋಲ್ಡ್ ಕಾರ್ಡ್ ಮಾಡಿ ಹಂಚುತ್ತಿದ್ದಾರೆ‌. ಸಿನಿಮಾ ಸ್ಟೈಲ್ ಅಲ್ಲಿ ಮಾಡಿದ್ದಾರೆ. ಅವರೇಕೆ ಇಷ್ಟೊಂದು ಹತಾಶರಾಗಿದ್ದಾರೆ. ಹರಿಶ್ಚಂದ್ರನ ಮೊಮ್ಮಗ ಏನು ಹಂಚಿದ್ದಾನೆ.

ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳಿ, ಹೆಣ್ಣು ಮಕ್ಕಳನ್ನು ಅಗೌರವದಿಂದ ಕಂಡಿದ್ದಾರೆ. ಮಾಧ್ಯಮಗಳಲ್ಲಿ ಅವರ ಕರ್ಮಕಾಂಡ ತೋರಿಸುತ್ತಿದ್ದರು. ಇದರ ವಿರುದ್ದ ಹೊಸ ಕಾನೂನು ಮಾಡಬೇಕು ಎಂದು ಯಾರೋ ಹೇಳುತ್ತಿರುವುದನ್ನು ನಾನು ಕೇಳಿದೆ” ಎಂದರು.

ಕೆಪಿಸಿಸಿ ಅಧ್ಯಕ್ಷರು ಬುದ್ದಿವಂತರೇ, ಅವರು ಏನು ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ “ನಾವು ಮಾಡಿರುವುದಕ್ಕೆ, ಮಾಡುತ್ತೇವೆ ಎಂದು ಹೇಳಿದ್ದಕ್ಕೆ ಜನ ಈಚೆ ಬಂದು ನಮಗೆ 136 ಸ್ಥಾನ ಕೊಟ್ಟಿದ್ದಾರೆ. ನೀನೇನು ಮಾಡಲಿಲ್ಲ ಅದಕ್ಕೆ ಜನ 18 ಸ್ಥಾನಗಳನ್ನು ಕೊಟ್ಟಿರುವುದು” ಎಂದು ವಾಗ್ದಾಳಿ ನಡೆಸಿದರು.

ಬೆಜೆಪಿ ಗೊಂದಲದಲ್ಲಿ ಮುಳುಗಿದೆ. ರೈತರು, ತಾಯಂದಿರು, ಯುವ ಸಮುದಾಯ, ಎಲ್ಲಾ ವರ್ಗದ ಜನರು ಹಾಗೂ ದಳ- ಬಿಜೆಪಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಬೇಕು ಎಂದು ತೀರ್ಮಾನ ಮಾಡಿದ್ದಾರೆ” ಎಂದರು.

ಕಾಂಗ್ರೆಸ್ ಹತಾಶೆಯಿಂದ ಕೂಡಿದೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ “ಅವರು ಹತಾಶರಾಗಿದ್ದಾರೆ ಅದನ್ನು ನಮ್ಮ ಮೇಲೆ ಹೇಳುತ್ತಿದ್ದಾರೆ. ಪ್ರಧಾನಿಗಳೇ ಹತಾಶರಾಗಿ ಮಂಗಳಸೂತ್ರದ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಸ್ಥಾನಕ್ಕೆ ತಕ್ಕಂತೆ ಮಾತನಾಡುತ್ತಿಲ್ಲ. ಸಮಾಜದಲ್ಲಿ ಅಸಮಾನತೆ ಇರಬಾರದು ಎಂದು ಹೇಳಬೇಕಾದವರೆ ಅಲ್ಪಸಂಖ್ಯಾತರ ಬಗ್ಗೆ ಮಾತನಾಡುತ್ತಿದ್ದಾರೆ. ನಾವು ಸಂವಿಧಾನದ ಮೇಲೆ ಪ್ರಮಾಣ ಮಾಡಿರುತ್ತೇವೆ. ಬೇಧ ಭಾವ ಮಾಡುವುದು ಅಪರಾಧ” ಎಂದರು.

 

 

ಫ್ರೆಶ್ ನ್ಯೂಸ್

Latest Posts

Featured Videos