ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ರೀತಿ ಬರ ಪರಿಹಾರ ಬಿಡುಗಡೆ: ಡಿ.ಕೆ ಶಿವಕುಮಾರ್

ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ರೀತಿ ಬರ ಪರಿಹಾರ ಬಿಡುಗಡೆ: ಡಿ.ಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕಕ್ಕೆ ಕೇಂದ್ರ ಸರ್ಕಾರ 3,454 ಕೋಟಿ ರೂ ಬರಪರಿಹಾರ ಬಿಡುಗಡೆ ಮಾಡಿದ್ದು, ಈ ಕುರಿತು ಮಾಧ್ಯಮಮಿತ್ರರೊಂದಿಗೆ ಪ್ರತಿಕ್ರಿಯಿಸಿದ ಡಿಸಿಎಂ, ನಮಗೆ ಬಹಳ ಕಡಿಮೆ ಪರಿಹಾರ ಕೊಟ್ಟಿದ್ದಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಟ್ಟಿರುವ ಬರಪರಿಹಾರ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಟೀಕಿಸಿದರು.ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ನಮ್ಮ ಪಾಲಿನ ಹಣ ಸರಿಯಾಗಿ ನೀಡಿಲ್ಲ. ಕೊಡಬೇಕಾದ ಪಾಲು ಸರಿಯಾಗಿ ಕೊಟ್ಟಿಲ್ಲ. ಕನಿಷ್ಠ 15 ಸಾವಿರ ಕೋಟಿ ರೂ. ನಾದ್ರೂ ಕೊಡಬೇಕಿತ್ತು.

ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ  ರೀತಿ ಪರಿಹಾರ ಕೊಟ್ಟಿದ್ದಾರೆ. ಬರ ವಿಚಾರದಲ್ಲಿ ರಾಜಕೀಯ ಮಾಡೋದು ಬೇಡ ಎಂದರು. ಕೇಂದ್ರ ಸರ್ಕಾರದ ವಿರುದ್ದ ನಮ್ಮ ಹೋರಾಟ ಮುಂದುರೆಸುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos