ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಆದರೆ ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಲಿಂಗಾಯತ ನಾಯಕ ಶಾಮನೂರು ಶಿವ ಶಂಕರಪ್ಪ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸಂಸದ ಗೆಲುವು ಸಾಧಿಸಲು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.
ಶಾಮನೂರು ಹೇಳಿಕೆಗೆ ತಿರುಗೇಟು ನೀಡಿದ ಅವರು, ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದ್ದಾರೆ. ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ಬಸವಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ ನಂತರ ನಿನ್ನೆ ಮಾತನಾಡಿದ್ದ ಶಾಮನೂರು ಶಿವಶಂಕರಪ್ಪ, ಜಿಲ್ಲೆಯ ಜನರು ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ. ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಆಗಿದೆ ಎಂದು ಸಂಸದ ರಾಘವೇಂದ್ರ ಅವರನ್ನು ಶ್ಲಾಘಿಸಿದ್ದರು. ಸಂಸದ ರಾಘವೇಂದ್ರ ಗೆಲ್ಲಿಸಿ ಎಂಬ ಶಾಮನೂರು ಹೇಳಿಕೆ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.