ಹೆಚ್‌ಡಿಕೆ ಕಮಲದ ಧ್ವಜ ಹಾಕಿಕೊಂಡಿದ್ದಾರೆ, ಬದುಕಿದ್ದು ಸತ್ತಂತೆ: ಡಿ ಕೆ ಶಿವಕುಮಾರ್

ಹೆಚ್‌ಡಿಕೆ ಕಮಲದ ಧ್ವಜ ಹಾಕಿಕೊಂಡಿದ್ದಾರೆ, ಬದುಕಿದ್ದು ಸತ್ತಂತೆ: ಡಿ ಕೆ ಶಿವಕುಮಾರ್

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ರಾಜ್ಯದ ಜನರಿಗೆ ನಾವು ಹೇಳಿದಂತೆ ಮಾತು ಉಳಿಸಿಕೊಂಡಿದ್ದೇವೆ. ಮಂಡ್ಯದ ಜನತೆ ಸ್ವಾಭಿಮಾನಕ್ಕೆ ಮತಕೊಡಿ ಎಂದು ಮನವಿ ಮಾಡಿದರು.

ಈ ರಾಜಕಾರಣ ನೋಡಿದರೆ ನಾಚಿಗೆ ಆಗುತ್ತೆ. ಪುಟ್ಟರಾಜು ಅವರು ಟಿಕೆಟ್​ಗಾಗಿ ಕಾದು ಕುಳಿತಿದ್ದ, ಇದೀಗ ಗೋವಿಂದ. ಕುಮಾರಸ್ವಾಮಿ ಕಮಲದ ಧ್ವಜ ಹಾಕಿಕೊಂಡಿದ್ದಾರೆ. ಬದುಕಿದ್ದು ಸತ್ತಂತೆ ಎಂದರು. ಅಲ್ಲದೆ, ಸ್ಥಳೀಯರನ್ನು ಆಯ್ಕೆ ಮಾಡುವಾಗ ಮಂಡ್ಯ ಗೌಡಿಕೆಯನ್ನು ಬೇರೆಯವರಿಗೆ ಕೊಟ್ಟಿಲ್ಲ. ಕಳೆದ ಬಾರಿ ಮೈತ್ರಿಯಂತೆ ಕುಮಾರಸ್ವಾಮಿ ಅವರಿಗೆ ಸಹಾಯ ಮಾಡಲು ಬಂದಿದ್ದೆ. ಆದರೆ ಅವರಿಗೆ ಅಧಿಕಾರ ಉಳಿಸಿಕೊಳ್ಳಲು ಆಗಿಲ್ಲ. ಆದರೆ ಈಗ ತಮ್ಮ ಅಧಿಕಾರ ತೆಗೆದವರ ಜೊತೆಯೇ ಕುಮಾರಸ್ವಾಮಿ ಹೋಗಿದ್ದಾರೆ ಎಂದರು.

ಹೆಚ್​.ಡಿ.ಕುಮಾರಸ್ವಾಮಿ ಹಾಸನದಿಂದ ರಾಮನಗರಕ್ಕೆ ಬಂದಿದ್ದರು. ಇದೀಗ ಮಂಡ್ಯಕ್ಕೆ ಬಂದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು, ಮಾಡಲಿ. ಬೆಂಗಳೂರು ಗ್ರಾಮಾಂತರದಲ್ಲಿ ಭಾವನನ್ನು ಬಿಜೆಪಿಯಿಂದ ನಿಲ್ಲಿಸಿದ್ದಾರೆ. ಎಲ್ಲಾ ಕಡೆ ನೀವೇ ನಿಂತರೆ ಕಾರ್ಯಕರ್ತರು ಏನು ಮಾಡುತ್ತಾರೆ ಎಂದು ಡಿಕೆ ಶಿವಕುಮಾರ್ ಅವರು ಪ್ರಶ್ನಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos