ಡಿಕೆಶಿ ವಿರುದ್ಧ ‘FIR’ ದಾಖಲು

ಡಿಕೆಶಿ ವಿರುದ್ಧ ‘FIR’ ದಾಖಲು

ಬೆಂಗಳೂರು: ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಕರ್ನಾಟಕ ಕಾಂಗ್ರೆಸ್​ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬಿ.ಆರ್.ನಾಯ್ಡು ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

ಬಿಜೆಪಿಯ ಕಾನೂನು ಪ್ರಕೋಷ್ಟ ಮಾಜಿ ಸಂಚಾಲಕ ಯೋಗೇಂದ್ರ ಹೊಡಗಟ್ಟ ಅವರು ದೂರು ಸಲ್ಲಿಸಿದ್ದಾರೆ. ಮೊದಲು ಬೆಂಗಳೂರಿನ ಜನಪ್ರತಿನಿಧಿ ಕೋರ್ಟ್ ಗೆ ಖಾಸಗಿ ದೂರು ಸಲ್ಲಿಸಿದ್ದರು. ನಾನು ಬಿಜೆಪಿಯ ಕರ ಸೇವಕ ನನ್ನನ್ನು ಬಂಧಿಸಿ ಎಂಬ ಪೋಸ್ಟರ್ ತಿರುಚಿ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಕಾಂಗ್ರೆಸ್ ಪೋಸ್ಟ್ ಮಾಡಿತ್ತು. ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಹಿನ್ನೆಲೆ ಜನಪ್ರತಿನಿಧಿಗಳ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಅಂತೆಯೇ ಇದೀಗ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos