ದೇವೇಗೌಡರ ವಿರುದ್ದ ವಾಗ್ದಾಳಿ ನಡೆಸಿದ ಡಿ.ಕೆ ಸುರೇಶ್

ದೇವೇಗೌಡರ ವಿರುದ್ದ ವಾಗ್ದಾಳಿ ನಡೆಸಿದ ಡಿ.ಕೆ ಸುರೇಶ್

ಬೆಂಗಳೂರು: ಆದಾಯ ತೆರಿಗೆ ಅಧಿಕಾರಿಗಳು ಕಾರ್ಯಕರ್ತರಿಗೆ ಬೆದರಿಕೆ ಒಡ್ಡುತ್ತಿದ್ದಾರೆ, ಇದೆಲ್ಲ ನಿಲ್ಲದಿದ್ದರೆ ಆದಾಯ ತೆರಿಗೆ ಕಚೇರಿಯ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ  ಎಂದು ಡಿ.ಕೆ ಸುರೇಶ್ ತಿಳಿಸಿದರು.

ಬಾಲಕಿಯನ್ನ ಅಪಹರಿಸಿ ಜಮೀನು ಬರೆಸಿಕೊಂಡಿರುವ ಆರೋಪ ಮಾಡಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ವಿರುದ್ದ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಡಿ.ಕೆ ಸುರೇಶ್, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಮತ್ತು ಹೆಚ್ ಡಿ ಕುಮಾರಸ್ವಾಮಿ ತನ್ನ ಮತ್ತು ಡಿಕೆ ಶಿವಕುಮಾರ್ ವಿರುದ್ಧ ಮಾಡುತ್ತಿರುವ ಆರೋಪಗಳಿಗೆ ತಕ್ಕ ಉತ್ತರ ನೀಡುತ್ತೇವೆ, ಬೇರೆಯವರ ಆಸ್ತಿ ಕಬಳಿಸುವ, ಬಾಲಕಿಯನ್ನು ಅಪಹರಿಸುವ ದುಸ್ಥಿತಿ ನಮಗೆ ಬಂದಿಲ್ಲ. ಮೊದಲಿನಿಂದಲೂ ದೇವೇಗೌಡರು ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಫ್ರೆಶ್ ನ್ಯೂಸ್

Latest Posts

Featured Videos