ನವದೆಹಲಿ, ಅ. 1: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರ ನ್ಯಾಯಾಂಗ ಬಂಧನವನ್ನು ಅ. 15 ವರೆಗೆ ವಿಸ್ತರಿಸಲಾಗಿದೆ.
ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗೆ ಇಡಿ ಅಧಿಕಾರಿಗಳು ಇಂದು ಡಿಕೆ ಶಿವಕುಮಾರ್ ಅವರನ್ನು ಹಾಜರುಪಡಿಸಿದರು. ಕೋರ್ಟ್ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದೆ.
ಅ. 4 ಮತ್ತು 5ರಂದು ಇಡಿ ಅಧಿಕಾರಿಗಳು ಡಿಕೆಶಿ ವಿಚಾರಣೆ ನಡೆಸಲು ಕೋರ್ಟ್ ಅವಕಾಶ ನೀಡಿದೆ.