ಡಿಕೆಶಿಗೆ ಕೊನೆಗೂ ಸಿಕ್ತು ಜಾಮೀನು..!

ಡಿಕೆಶಿಗೆ ಕೊನೆಗೂ ಸಿಕ್ತು ಜಾಮೀನು..!

ನವದೆಹಲಿ,ಅ. 23 : ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಇಡಿ ದಾಖಲಿಸಿದ್ದ ಪ್ರಕರಣದ ಅಡಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ 48 ದಿನಗಳಿಂದ ಜೈಲಿನಲ್ಲಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಇಂದು ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಸೆ.3ರಂದು ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. 4 ದಿನ ವಿಚಾರಣೆಗೊಳಗಾದ ಡಿ.ಕೆ.ಶಿವಕುಮಾರ್ ಅವರು, ಬಂಧನದ ನಂತರ 14 ದಿನಗಳ ಕಾಲ ಜಾರಿನಿರ್ದೇಶನಾಲಯದ ವಶದಲ್ಲಿದ್ದು ವಿಚಾರಣೆ ಎದುರಿಸಿದರು. ಅನಂತರ ಡಿ.ಕೆ.ಶಿವಕುಮಾರ್ ಅವರನ್ನು ನ್ಯಾಯಾಲಯ ಬಂಧನಕ್ಕೆ ಒಪ್ಪಿಸಲಾಗಿತ್ತು. ಅ.24ಕ್ಕೆ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಳ್ಳಲಿತ್ತು. ಈ ಮಧ್ಯೆ ಡಿ.ಕೆ.ಶಿವಕುಮಾರ್ ಅವರ ಅರ್ಜಿಯನ್ನು ಪರಿಗಣಿಸಿದ ದೆಹಲಿ ಹೈಕೋರ್ಟ್ ನ್ಯಾಯಾಧೀಶರಾದ ಸುರೇಶ್ಕುಮಾರ್ ಕೈಟಾ ಅವರು ಜಾಮೀನು ಮಂಜೂರು ಮಾಡಿದ್ದಾರೆ. ಜಾಮೀನು ಜೊತೆಗೆ ಹೈಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿದ್ದು, 25 ಲಕ್ಷ ರೂ. ಬಾಂಡ್ ನೀಡಬೇಕು, ವಿದೇಶಿ ಪ್ರಯಾಣ ಕೈಗೊಳ್ಳುವಂತಿಲ್ಲ, ಪಾಸ್ ಪೋರ್ಟ್ನ್ನು ಸರೆಂಡರ್ ಮಾಡಬೇಕು, ಜಾರಿ ನಿರ್ದೇಶನಾಲಯದ ವಿಚಾರಣೆಗೆ ಸಹಕರಿಸಬೇಕು, ಜಾಮೀನು ಆದೇಶದ ಪ್ರತಿಯನ್ನು ಕೆಳಹಂತದ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಷರತ್ತು ವಿಧಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos