ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವು

ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವು

ಮಂಡ್ಯ, ಸೆ. 27 : ಗರ್ಭಿಣಿ ಜೊತೆಗೆ ನರ್ಸ್ ಬಾರದೇ ಒಬ್ಬರನ್ನೇ ವಾಕ್ ಮಾಡಲು ಬಿಟ್ಟಿದ್ದಾರೆ. ಈ ವೇಳೆ ಮಹಿಳೆ ಕುಸಿದು ಬಿದ್ದು ತೀವ್ರ ರಕ್ತಸ್ರಾವವಾಗಿ ಹೆರಿಗೆ ಸಂದರ್ಭದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಂಡ್ಯದ ಆಶ್ರಯ ನರ್ಸಿಂಗ್ ಹೋಮ್ ನಲ್ಲಿ ನಡೆದಿದೆ.
ಸುಶೀಲಾ (32) ಸಾವನ್ನಪ್ಪಿದ ಮಹಿಳೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದ ನಿವಾಸಿ. ವೈದ್ಯರ ನಿರ್ಲಕ್ಷ್ಯದಿಂದಲೇ ಮಹಿಳೆ ಮೃತಪಟ್ಟಿರುವುದಾಗಿ ಆಕೆಯ ಪೋಷಕರು ಆರೋಪ ಮಾಡುತ್ತಿದ್ದು, ಪ್ರತಿಭಟನೆ ನಡೆಸಿದ್ದಾರೆ. ಗುರುವಾರ ಸುಶೀಲಾರಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಂಜಾನೆ 3 ಗಂಟೆ ಸುಮಾರಿಗೆ ನರ್ಸ್ ಗಳು ಗರ್ಭಿಣಿಗೆ ವಾಕ್ ಮಾಡಲು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos