ವೈಧ್ಯರಿಗೆ ಶಾಸಕ ವೇದವ್ಯಾಸ ತಾಕೀತು

ವೈಧ್ಯರಿಗೆ ಶಾಸಕ  ವೇದವ್ಯಾಸ ತಾಕೀತು

ಮಂಗಳೂರು, ಜೂನ್.11, ನ್ಯೂಸ್ ಎಕ್ಸ್ ಪ್ರೆಸ್: ವೆನ್ ಲಾಕ್ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಧೀಡೀರ್  ವೆನ್ ಲಾಕ್ ಆಸ್ಪತ್ರೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ರೋಗಿಗಳು ಶಾಸಕರಲ್ಲಿ ಆಸ್ಪತ್ರೆಯಲ್ಲಿರುವ ಕುಂದುಕೊರತೆಗಳನ್ನು ಹೇಳಿಕೊಂಡರು. ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ಮತ್ತು ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ಕರೆದು ಬಡ, ಮಧ್ಯಮ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಯಾವುದೇ ಲೋಪ ಉಂಟಾಗಬಾರದೆಂದು ಶಾಸಕರು ತಾಕೀತು ಮಾಡಿದರು.

ಶಾಸಕರೊಂದಿಗೆ ಬಿಜೆಪಿ ಮುಖಂಡರಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು, ವಸಂತ ಜೆ ಪೂಜಾರಿ, ರಮೇಶ್ ಕಂಡೆಟ್ಟು, ಅನಿಲ್ ರಾವ್, ಚೇತಕ್ ಪೂಜಾರಿ, ಉಮಾನಾಥ ಶೆಟ್ಟಿಗಾರ್, ಮನೋಹರ್ ಕದ್ರಿ ಸಹಿತ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು

ಫ್ರೆಶ್ ನ್ಯೂಸ್

Latest Posts

Featured Videos