ಮನೆ ಬಾಗಿಲಿಗೆ ಪಾಲಿಕೆಯ ವೈದ್ಯರು: ಸಚಿವ ಆರ್.ಅಶೋಕ

ಮನೆ ಬಾಗಿಲಿಗೆ ಪಾಲಿಕೆಯ ವೈದ್ಯರು: ಸಚಿವ ಆರ್.ಅಶೋಕ

ಬೆಂಗಳೂರು: ಜನರ ಆರೋಗ್ಯದ ಸಮಗ್ರ ಮಾಹಿತಿ ಕಲೆ ಹಾಕಲು ಬಿಬಿಎಂಪಿ ವೈದ್ಯರ ತಂಡ ಮನೆ ಬಾಗಿಲಿಗೇ ಬರಲಿದೆ. 27 ವಿಧಾನಸಭಾ ಕ್ಷೇತ್ರಗಳ 54 ವಾರ್ಡ್ಗಳಲ್ಲಿ ಅನುಷ್ಠಾನಗೊಳ್ಳುವ ಈ ಸಮೀಕ್ಷೆಗೆ ಕಂದಾಯ ಸಚಿವ ಆರ್.ಅಶೋಕ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಸೋಮವಾರ ಚಾಲನೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ನಗರದಲ್ಲಿ ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ದೃಷ್ಟಿಯಿಂದ ಈ ಆರೋಗ್ಯ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಕೊರೊನಾ ಸೋಂಕು ದೃಢಪಟ್ಟರೆ ತಕ್ಷಣ ಅವರಿಗೆ ಸೂಕ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಇದು ನೆರವಾಗಲಿದೆ.

‘ಪಾಲಿಕೆ ವೈದ್ಯರ ತಂಡವು ನಗರದ 29 ಲಕ್ಷ ಮನೆಗಳಿಗೂ ಹಂತ ಹಂತವಾಗಿ ಭೇಟಿ ನೀಡಿ, ಆ ಕುಟುಂಬಗಳ ಸದಸ್ಯರ ಆರೋಗ್ಯ ತಪಾಸಣೆ ನಡೆಸಲಿದೆ. ಕುಟುಂಬದ ಸದಸ್ಯರು ಕ್ಯಾನ್ಸರ್, ಅಧಿಕ ರಕ್ತದೊತ್ತಡ, ಮಧುಮೇಹ ಸೇರಿದಂತೆ ಇನ್ನಿತರೆ ರೋಗಗಳನ್ನು ಹೊಂದಿದ್ದರೆ, ಈ ಕುರಿತ ಮಾಹಿತಿಯನ್ನು ಕಲೆ ಹಾಕಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ್ ಗುಪ್ತ, ವಿಶೇಷ ಆಯುಕ್ತರುಗಳಾದ ಡಿ.ರಂದೀಪ್, ತುಳಸಿ ಮದ್ದಿನೇನಿ, ಹರೀಶ್ ಕುಮಾರ್, ಮನೋಜ್ ಜೈನ್, ದಯಾನಂದ್, ರವೀಂದ್ರ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos