ಬಿಜೆಪಿ ಸೇರ್ಪಡೆಯಾದ ಮಾಜಿ ಆಟಗಾರ ಕಿಕೆಟಿಗ ದೊಡ್ಡ ಗಣೇಶ್‌

ಬಿಜೆಪಿ ಸೇರ್ಪಡೆಯಾದ ಮಾಜಿ ಆಟಗಾರ ಕಿಕೆಟಿಗ ದೊಡ್ಡ ಗಣೇಶ್‌

ಬೆಂಗಳೂರು: ಈ ಬಾರಿ ಲೋಕಸಭಾ  ಚುನಾವಣೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಭೇರಿ ಸಾಧಿಸಿದಂತಹ ಮಾಜಿ ಸಂಸದ ಸುಮಲತಾ ಅಂಬರೀಶ್ ಅವರು ಇಂದು ಬೆಳಿಗ್ಗೆ 12 ಗಂಟೆಗೆ ಬಿಜೆಪಿ ಪಕ್ಷವನ್ನು ಸೇರಿಕೊಂಡರು, ಈ ಸಂದರ್ಭದಲ್ಲಿ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಅವರು ಕೂಡ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಬಿಎಸ್​ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಕ್ರಿಕೆಟಿಗ ದೊಡ್ಡ ಗಣೇಶ ಮತ್ತು ಕೊಪ್ಪಳ ಮಾಜಿ ಸಂಸದ ಶಿವರಾಮಗೌಡ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಪಕ್ಷ ಸೇರಿದ್ದರು.

ಕಿಕೆಟಿಗ ದೊಡ್ಡ ಗಣೇಶ ಕರ್ನಾಟಕ ರಣಜಿ ತಂಡದ ಪರವಾಗಿ ಮತ್ತು ಭಾರತ ತಂಡದ ಪರವಾಗಿ 1997 ರಲ್ಲಿ 4 ಟೆಸ್ಟ್ ಮತ್ತು ಒಂದು ಏಕದಿನ ಪಂದ್ಯಗಳಲ್ಲಿ ಆಡಿದ್ದಾರೆ. ಅವರು ಬೌಲರ್ ಮತ್ತು ಬ್ಯಾಟ್ಸ್‌ಮನ್ ಆಗಿದ್ದರು. ಇದೀಗ ಇವರು ಬಿಜೆಪಿಗೆ ಸೇರುವ ಮೂಲಕ ರಾಜಕೀಯ ಕ್ಷೇತ್ರದಲ್ಲೂ ಕಾಲಿಟ್ಟಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos