ಬೆಂಗಳೂರು, ಆ. 2 : ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ನಾಯಕರು ದಿನನಿತ್ಯ ಕಿರುಕುಳ ನೀಡುತ್ತಿದ್ದರು. ಸ್ವತಂತ್ರವಾಗಿ ಕೆಲಸ ಮಾಡಲು ಬಿಡಲಿಲ್ಲ. ನೆಮ್ಮದಿಯಾಗಿ ನಿದ್ದೆ ಮಾಡಲೂ ಬಿಡಲಿಲ್ಲ ಎಂದು ದೇವೇಗೌಡರು ಗಂಭೀರ ಆರೋಪ ಮಾಡಿದ್ದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹೇಳಿಕೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಪ್ರಮುಖ ಜವಾಬ್ದಾರಿ ನಿರ್ವಹಿಸಿದ್ದ ಡಾ.ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್ ಅವರಂತಹ ನಾಯಕರು ಮೌನವಾಗಿರುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಹೈಕಮಾಂಡ್ ಬಳಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.