ನಟ ಡಾ.ರಾಜ್‌ ಕುಮಾರ್ ಹುಟ್ಟುಹಬ್ಬ

ನಟ ಡಾ.ರಾಜ್‌ ಕುಮಾರ್ ಹುಟ್ಟುಹಬ್ಬ

ಬೆಂಗಳೂರು: ಇಂದು ವರನಟ, ನಟಸಾರ್ವಭೌಮ ಡಾ. ರಾಜ್‌ಕುಮಾರ್‌ ಅವರ 95ನೇ ಹುಟ್ಟುಹಬ್ಬ. ದೈಹಿಕವಾಗಿ ಎಲ್ಲರನ್ನಗಲಿ 18ವರ್ಷಗಳು ಕಳೆದರೂ, ಇಂದಿಗೂ ಅವರ ಕೋಟ್ಯಂತರ ಅಭಿಮಾನಿಗಳು ರಾಜ್‌ ಸ್ಮರಿಸದ ದಿನವಿಲ್ಲ. ಅದರಲ್ಲೂ ಅವರ ಜಯಂತಿ ಮತ್ತು ಪುಣ್ಯಸ್ಮರಣೆ ದಿನವಂತೂ ಬಗೆ ಬಗೆ ಕಾರ್ಯಕ್ರಮಗಳ ಮೂಲಕ ಅವರನ್ನು ಮತ್ತೆ ನೆನಪಿಸಿಕೊಳ್ಳುವ ಕಾರ್ಯಗಳು ನಡೆಯುತ್ತವೆ.

ಪ್ರತಿ ವರ್ಷವೂ ಈ ದಿನದಂದು ಬರೀ ಕುಟುಂಬಸ್ಥರು, ಬರೀ ಅಭಿಮಾನಿಗಳು ಮಾತ್ರವಲ್ಲದೇ ಸರ್ಕಾರವೂ ಈ ದಿನವನ್ನು ಅಷ್ಟೇ ಅರ್ಥಪೂರ್ಣವಾಗಿ ಆಚರಿಸುತ್ತದೆ. ಬೆಂಗಳೂರಿನ ಕಂಠೀರವ ಸ್ಡುಡಿಯೋದಲ್ಲಿನ ಡಾ. ರಾಜ್‌ ಸಮಾಧಿಗೆ ಹೂಗಳ ಅಲಂಕಾರ ಮಾಡಲಾಗಿದೆ. ಅದರಂತೆ, ಇಂದು ಪುಣ್ಯಭೂಮಿಯತ್ತ ದೌಡಾಯಿಸುವ ಅಭಿಮಾನಿಗಳು ಹೆಚ್ಚಿರುವುದರಿಂದ ಅವರಿಗೂ ಎಲ್ಲ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತಿದೆ.

ವರನಟ ಡಾ.ರಾಜ್‌ಕುಮಾರ್ ಅವರ 95ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ರಾಜ್ ಕುಮಾರ್ ಕುಟುಂಬಸ್ಥರು ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಕುಮಾರ್ ಸಮಾಧಿಗೆ ಭೇಟಿ ನೀಡಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್‌ಕುಮಾರ್ ಸ್ಮಾರಕದ ಬಳಿ ರಾಘವೇಂದ್ರ ರಾಜ್‌ಕುಮಾರ್, ಪತ್ನಿ ಮಂಗಳ, ಡಾ.ರಾಜ್ ಪುತ್ರಿ ಲಕ್ಷ್ಮಿ ದಂಪತಿ, ಅಶ್ವಿನಿ ರಾಜ್‌ಕುಮಾರ್ ಪುತ್ರಿ ವಂದಿತಾ ಡಾ.ರಾಜ್ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಹೊನ್ನವಳ್ಳಿ ಕೃಷ್ಣ ಕೂಡ ಭಾಗಿಯಾಗಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos