ಕುಡಿದ ಮತ್ತಿನಲ್ಲಿ ಪತ್ನಿಕೊಂದ ಪತಿ

ಕುಡಿದ ಮತ್ತಿನಲ್ಲಿ ಪತ್ನಿಕೊಂದ ಪತಿ

ಬಾಗಲಕೋಟೆ, ಮೇ. 29, ನ್ಯೂಸ್‍ ಎಕ್ಸ್ ಪ್ರೆಸ್‍:  ಕುಡಿದ ಮತ್ತಿನಲ್ಲಿ ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಪತಿ, ಬಳಿಕ ತಾನು ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ  ಜಿಲ್ಲೆಯ ಸೊಕನಾದಗಿ ಗ್ರಾಮದಲ್ಲಿ ನಡೆದಿದೆ.

ರೇಣುಕಾ ಬದ್ನೂರ(32)ಕೊಲೆಯಾದ ದುರ್ದೈವಿ. ಪರಸಪ್ಪ ಬದ್ನೂರ(38)  ಪತ್ನಿಯನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಪತಿ. ದಂಪತಿ ಒಂದು ಗಂಡು, ಒಂದು ಹೆಣ್ಣು ಮಕ್ಕಳನ್ನು ಹೊಂದಿದ್ದರು.  ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಎಸ್‌ಪಿ ಅಭಿನವ್ ಖರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಘಟನೆ ಸಂಬಂಧ ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos