ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದ ಡಿಆರ್​ಎಫ್​ಒ ದರ್ಶನ್ ಅಮಾನತು!

ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದ ಡಿಆರ್​ಎಫ್​ಒ ದರ್ಶನ್ ಅಮಾನತು!

ಬೆಂಗಳೂರು: ರಾಜ್ಯದಲ್ಲಿ ಹುಲಿ ಉಗುರಿನ ಸದ್ದು ಜೋರಾಗಿದೆ. ಇದೀಗ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರನ್ನು ಕೊಪ್ಪ ಡಿಎಫ್​ಒ ನಂದೀಶ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಡಿಆರ್​ಎಫ್​ಒ ಅವರನ್ನು ದರ್ಶನ್ ಅಮಾನತು ಮಾಡಲಾಗಿದೆ. ಅರಣ್ಯ ಇಲಾಖೆಯ ಕಳಸ ಉಪ ವಲಯ ಅರಣ್ಯಾಧಿಕಾರಿ ದರ್ಶನ್‌ ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದಾರೆ ತನಿಖೆ ನಡೆಸಿ, ಕ್ರಮಕೈಗೊಳ್ಳಿ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಅರೆನೂರು ಗ್ರಾಮದ ಸುಪ್ರೀತ್ ಮತ್ತು ಅಬ್ದುಲ್ ಅವರು ಚಿಕ್ಕಮಗಳೂರು ಜಿಲ್ಲೆ ಆಲ್ದೂರು ವಲಯ ಅರಣ್ಯಾಧಿಕಾರಿಗೆ ಲಿಖಿತ ದೂರು ನೀಡಿದ್ದರು.

ಹುಲಿ ಉಗುರು ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಹುಲಿ ಉಗುರು ಧರಿಸಿರುವ ರಾಜ್ಯದ ವಿಐಪಿ ಮಂದಿಗೆ ತಲೆನೋವು ಶುರುವಾಗಿದೆ. ಕನ್ನಡ ಚಿತ್ರರಂಗದ ಪ್ರಮುಖರ ವಿರುದ್ಧ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಆರೋಪ ಕೇಳಿಬಂತು. ಸೆಲೆಬ್ರೆಟಿಗಳು ಬೆನ್ನಲ್ಲೇ ರಾಜಕಾರಣಿಗಳು, ಉದ್ಯಮಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಆರೋಪ ಕೇಳಿಬಂದಿದೆ. ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದ ಡಿಆರ್​ಎಫ್​ಒ ದರ್ಶನ್ ಅವರ ವಿರುದ್ಧ ದೂರು ದಾಖಲಾಗಿತ್ತು.

 

 

ಫ್ರೆಶ್ ನ್ಯೂಸ್

Latest Posts

Featured Videos