ನರೇಗಾ ರೋಜಗಾರ ವಾಹಿನಿ ಅಭಿಯಾನಕ್ಕೆ ಚಾಲನೆ

ನರೇಗಾ ರೋಜಗಾರ ವಾಹಿನಿ ಅಭಿಯಾನಕ್ಕೆ ಚಾಲನೆ

ಹಗರಿಬೊಮ್ಮನಹಳ್ಳಿ: ಪಟ್ಟಣದ ತಾಲೂಕು ಪಂಚಾಯತಿ ಮುಂಭಾಗದಲ್ಲಿ ಗ್ರಾಮೀಣಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ, ತಾಲೂಕು ಪಂಚಾಯತಿ ನರೇಗಾ ಯೋಜನೆಯ ಸಹಯೋಗದಲ್ಲಿ ಶುಕ್ರವಾರದಂದು ಆಯೋಜಿಸಿದ್ದ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಹಿಳೆಯರು ಪಾಲ್ಗೊಳ್ಳುವಿಕೆ ಹೆಚ್ಚಿಸುವ ವಿಶೇಷ ರೋಜಗಾರ ವಾಹಿನಿ ಅಭಿಯಾನಕ್ಕೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಹಾಲಸಿದ್ದಪ್ಪ ಪೂಜೇರಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅಧಿಕಾರಿ ನರೇಗಾ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರು ಹೆಚ್ಚಿನ ಸಂಖೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಉದ್ಯೋಗ ನೀಡುವ ಉದ್ದೇಶದಿಂದ ನರೇಗಾ ರೋಜಗಾರ ವಾಹಿನಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಈ ಯೋಜನೆಯಡಿಯಲ್ಲಿ ಬಚ್ಚಲಗುಂಡಿ ನಿರ್ಮಾಣ, ಕೈತೋಟ, ಅಣಬೆ ಬೇಸಾಯ ಸೇರಿದಂತೆ ಇತರ ಉದ್ಯೋಗಗಳನ್ನು ಈ ಯೋಜನೆ ಅಡಿಯಲ್ಲಿ ಉತ್ತೇಜನ ನೀಡಲಾಗಿದ್ದು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕಾಗಿದೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos