ಡಿವೈಎಸ್ಪಿ ಆತ್ಮಹತ್ಯೆಗೆ ಯತ್ನ

ಡಿವೈಎಸ್ಪಿ ಆತ್ಮಹತ್ಯೆಗೆ ಯತ್ನ

ಮಂಡ್ಯ, ಅ.13 : ಕೈ, ಕಾಲಿನ ನರ ಕೊಯ್ದುಕೊಂಡು ಜಿಲ್ಲೆಯ ಶ್ರೀರಂಗಪಟ್ಟಣದ ಪೊಲೀಸ್ ಅಧಿಕಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಶ್ರೀರಂಗಪಟ್ಟಣ ವೃತ್ತದ ಡಿವೈಎಸ್ಪಿ ಯೋಗಾನಂದ್ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಅಧಿಕಾರಿ. ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲಿನ ನಿವಾಸದಲ್ಲಿ ಈ ಘಟನೆ ನಡೆದಿದೆ. ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡು ಮನೆಯಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ನೋಡಿದ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು.
ಈಗ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಯೋಗಾನಂದ್ ಅವರನ್ನು ಕರೆದುಕೊಂಡು ಹೋಗಲಾಗಿದೆ. ಅಧಿಕಾರಿಯ ಆತ್ಮಹತ್ಯೆ ಯತ್ನಕ್ಕೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಈ ಘಟನೆ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಫ್ರೆಶ್ ನ್ಯೂಸ್

Latest Posts

Featured Videos