ಇ. ಶ್ರೀಧರನ್ ಬಿಜೆಪಿಗೆ ಸೇರ್ಪಡೆ

ಇ. ಶ್ರೀಧರನ್ ಬಿಜೆಪಿಗೆ ಸೇರ್ಪಡೆ

ಮಲಪ್ಪುರಂ : ಮೆಟ್ರೊ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅಧಿಕೃತವಾಗಿ ಗುರುವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

ಬಿಜೆಪಿ ಕೇರಳ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ‘ವಿಜಯಯಾತ್ರೆ’ ಮಲಪ್ಪುರಂನ ಚಂಗರಮಕುಳA ತಲುಪಿದ ವೇಳೆ ಶ್ರೀಧರನ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ನಾಯಕರು ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಶ್ರೀಧರನ್ ಅವರನ್ನು ಸುರೇಂದ್ರನ್ ಪಕ್ಷಕ್ಕೆ ಬರ ಮಾಡಿಕೊಂಡರು.

ಈ ವೇಳೆ ಮಾತನಾಡಿದ ಶ್ರೀಧರನ್, ಇದು ಬದುಕಿನಲ್ಲಿ ಅತ್ಯಂತ ಮಹತ್ವದ ಕ್ಷಣ. ಪಕ್ಷದಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸಿದ್ದಕ್ಕೆ ಕೃತಜ್ಞತೆ ಎಂದು ತಿಳಿಸಿದರು.

ಬಿಜೆಪಿ ಸೇರುವುದಾಗಿ ಶ್ರೀಧರನ್ ಇತ್ತೀಚೆಗೆ ಘೋಷಿಸಿದ್ದರು. ಕೇರಳ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿಯೂ ಅವರು ಹೇಳಿದ್ದರು. ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ.

ಫ್ರೆಶ್ ನ್ಯೂಸ್

Latest Posts

Featured Videos