ಪೌಷ್ಠಿಕ ಆಹಾರ ಸೇವಿಸಿ

ಪೌಷ್ಠಿಕ ಆಹಾರ ಸೇವಿಸಿ

ಹಟ್ಟಿ ಚಿನ್ನದಗಣಿ: ಅಪೌಷ್ಟಿಕತೆಯನ್ನು ನಿರ್ಮೂಲನೆ ಮಾಡಲೆಂದೆ ಅಂಗನವಾಡಿ ಕೇಂದ್ರಗಳು ಇದ್ದು, ಗರ್ಭಿಣಿ, ಬಾಣಂತಿಯರು, ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ರಾಷ್ಟ್ರೀಯ ಪೋಷಣ ಅಭಿಯಾನ ಹಾಗೂ ಪ್ರಧಾನಮಂತ್ರಿ ಮಾತೃ ವಂದನಾ ಸಪ್ತಾಹ, ಈ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕೆಂದು ಅಂಗನವಾಡಿ ಮೇಲ್ವಿಚಾರಕಿ ಶಿವಲೀಲಾ ಹಿರೇಮಠ್ ಹೇಳಿದರು.

ಸಮೀಪದ ಗುರುಗುಂಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಐದುಭಾವಿ ಕೆನಾಲ್ ಕ್ರಾಸ್‌ನ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ಗರ್ಭಿಣಿ, ಬಾಣಂತಿಯರು ಹೆಚ್ಚು ಪೌಷ್ಠಿಕ ಆಹಾರ ಸೇವಿಸಬೇಕೆಂದು ಬಾಣಂತಿಯರನ್ನು ಉದ್ದೇಶಿಸಿ ಮಾತನಾಡಿದರು.

ರಾಷ್ಟ್ರೀಯ ಪೋಷಣ ಅಭಿಯಾನ ಯೋಜನೆ ಅಡಿಯಲ್ಲಿ ಇದೇ ತಿಂಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಪೌಷ್ಠಿಕ ಆಹಾರದ ಬಗ್ಗೆ ಅರಿವು ಮೂಡಿಸಿ, ಸರಿಯಾದ ಮಾರ್ಗದರ್ಶನ ನೀಡಲಾಗುವುದು ಎಂದರು.

ಈ ವೇಳೆ ಸ.ಹಿ.ಪ್ರಾ.ಶಾಲೆಯ ಮುಖ್ಯ ಗುರುಗಳಾದ ಚಂದ್ರಶೇಖರ್, ಗರ್ಭಿಣಿ ಮಹಿಳೆಯರಾದ ಗಂಗಮ್ಮ ಕೃಷ್ಣಪ್ಪ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಇದ್ದರು.

ಫ್ರೆಶ್ ನ್ಯೂಸ್

Latest Posts

Featured Videos