ಮಾರಕ ಕಾಯಿಲೆಗೆ ಈರುಳ್ಳಿ-ಬೆಳ್ಳುಳ್ಳಿ ಸೇವಿಸಿ

ಮಾರಕ ಕಾಯಿಲೆಗೆ ಈರುಳ್ಳಿ-ಬೆಳ್ಳುಳ್ಳಿ ಸೇವಿಸಿ

ಬೆಂಗಳೂರು, ಡಿ. 05: ಭಾರತದಲ್ಲಿ ಈ ಬಾರಿ ಈರುಳ್ಳಿ ಬೆಲೆ ಗಗನಕ್ಕೇರಿದೆ. ಇದೀಗ ಭಾರತದಿಂದ ಹೊರದೇಶಗಳಿಗೆ ಈರುಳ್ಳಿ ರಫ್ತು ಮಾಡುವುದನ್ನು ನಿರ್ಬಂಧಿಸಲಾಗಿದೆ. ಈ ಮೂಲಕ ದರದ ನಿಯಂತ್ರಣಕ್ಕೆ ಸರ್ಕಾರ ಮುಂದಾಗಿದೆ. ಇನ್ನೊಂದೆಡೆ ಸಸ್ಯಾಹಾರ ಮತ್ತು ಮಾಂಸಾಹಾರ ಅಡುಗೆಗೂ ಅನಿವಾರ್ಯವಾಗಿರುವ ಈರುಳ್ಳಿಯನ್ನು ಪ್ರತಿನಿತ್ಯ ಸೇವಿಸುವುದರಿಂದ ಸ್ತನ ಕ್ಯಾನ್ಸರ್ನಂತಹ ಮಾರಕ ಕಾಯಿಲೆಯನ್ನು ತಡೆಗಟ್ಟಬಹುದು.

ಕಚ್ಚಾ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಪ್ರತಿದಿನ ಸೇವಿಸುವ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆಯು ಬಹಳ ಕಡಿಮೆ ಇರುತ್ತದೆ ಎಂದು ಇತ್ತೀಚಿನ ಸಂಶೋಧನೆಯೊಂದು ಬಹಿರಂಗಪಡಿಸಿದೆ. ವಿಜ್ಞಾನಿಗಳು ಪೋರ್ಟೊ ರಿಕೊದ ಸುಮಾರು 600 ಮಹಿಳೆಯರ ಆಹಾರ ಪದ್ಧತಿಯನ್ನು ಸೂಕ್ಷ್ಮವಾಗಿ ಗಮನಿಸಿ ಈ ಸಂಶೋಧನೆಯನ್ನು ನಡೆಸಿದೆ. ಏಕೆಂದರೆ ಇದೇ ಭಾಗದಲ್ಲಿ ಕಳೆದೊಂದು ದಶಕದಲ್ಲಿ ಅತೀ ಹೆಚ್ಚು ಸ್ತನ ಕ್ಯಾನ್ಸರ್ ರೋಗಗಳು ಪತ್ತೆಯಾಗಿತ್ತು.

ಕಚ್ಚಾ ಈರುಳ್ಳಿ ಮತ್ತು ಬೆಳ್ಳುಳ್ಳಿಯಿಂದ ಮಾಡಿದ ಚಟ್ನಿ ದಿನಕ್ಕೆ ಎರಡು ಅಥವಾ ಅದಕ್ಕಿಂತ ಹೆಚ್ಚು ಬಾರಿ ಸೇವಿಸಿದ ಮಹಿಳೆಯರು ಸ್ತನ ಕ್ಯಾನ್ಸರ್ ಬರುವ ಸಾಧ್ಯತೆ ಶೇಕಡಾ 67 ರಷ್ಟು ಕಡಿಮೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.

ಸ್ತನ ಕ್ಯಾನ್ಸರ್ನಂತಹ ಮಹಾಮಾರಿಯ ಅಪಾಯವನ್ನ ತಪ್ಪಿಸಲು ನೀವು ನಿಮ್ಮ ದೈನಂದಿನ ಆಹಾರದಲ್ಲಿ ಕಚ್ಚಾ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಸೇರಿಸಿಕೊಳ್ಳಬೇಕು.

 

ಫ್ರೆಶ್ ನ್ಯೂಸ್

Latest Posts

Featured Videos