ಪೌಷ್ಟಿಕ ಆಹಾರ ಸೇವನೆ ಮುಖ್ಯ

ಪೌಷ್ಟಿಕ ಆಹಾರ ಸೇವನೆ ಮುಖ್ಯ

ಹುಳಿಯಾರು: ಪೌಷ್ಟಿಕ ಆಹಾರ ಸೇವನೆ ಮೂಲಕ ಗರ್ಭಿಣಿ ಹಾಗೂ ಬಾಣಂತಿಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹುಳಿಯಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಅನಸೂಯಮ್ಮ ತಿಳಿಸಿದರು.
ಹುಳಿಯಾರಿನ ಕೇಶವಾ ವಿದ್ಯಾ ಮಂದಿರದಲ್ಲಿ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪೋಷಣ್ ಅಭಿಯಾನ ಹಾಗೂ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿರುವ ಗರ್ಭಿಣಿಯರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಪೌಷ್ಟಿಕತೆ ಹಾಗೂ ರಕ್ತ ಹೀನತೆ ಒಳಪಡುತ್ತಿದ್ದಾರೆ. ಇದನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಗರ್ಭಿಣಿಯರು ಹೆಚ್ಚಿನ ಪ್ರಮಾಣದಲ್ಲಿ ಸೊಪ್ಪು, ತರಕಾರಿ, ಮೊಟ್ಟೆ, ಹಾಲು, ಹಣ್ಣು ಸೇವನೆ ಮಾಡಬೇಕು. ಜೊತೆಗೆ ಪ್ರತಿ ತಿಂಗಳು ಕಡ್ಡಾಯವಾಗಿ ಆಸ್ಪತ್ರೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.
ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಪೂರ್ಣಮ್ಮ ಅವರು ಮಾತನಾಡಿ ಆರೋಗ್ಯವೇ ಭಾಗ್ಯ. ಆರೋಗ್ಯದಿಂದ
ಕಿರಿಯ ಪುರುಷ ಆರೋಗ್ಯ ಸಹಾಯಕ ಬಿ.ಸಿ.ರೇಣುಕಾರಾಜ್, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಮಹಾಲಕ್ಷ್ಮೀ, ಕೇಶವಾ ಶಾಲೆಯ ಮುಖ್ಯ ಶಿಕ್ಷಕ ಸನತ್‌ಕುಮಾರ್, ಆಶಾಕಾರ್ಯಕರ್ತೆ ಪುಷ್ಪಾ, ಮಂಜುಳಾ, ಪದ್ಮಾ, ಅಂಗನವಾಡಿ ಕಾರ್ಯಕರ್ತೆಯರಾದ ಗಾಯಿತ್ರಿ, ಮನ್ನಾಬಾಯಿ, ಸುಮಿತ್ರಾ, ಗೀತಾ ಮತ್ತಿತರರು ಇದ್ದರು.

ಫ್ರೆಶ್ ನ್ಯೂಸ್

Latest Posts

Featured Videos