ಪ್ರತಿಯೊಬ್ಬರ ಬಾಳಿನಲ್ಲಿ ಶಿಕ್ಷಣ ಎಂಬುದು ಅತಿ ಪ್ರಮುಖದ ಘಟ್ಟ: ಸಿಎಂ

ಪ್ರತಿಯೊಬ್ಬರ ಬಾಳಿನಲ್ಲಿ ಶಿಕ್ಷಣ ಎಂಬುದು ಅತಿ ಪ್ರಮುಖದ ಘಟ್ಟ: ಸಿಎಂ

ಬೆಂಗಳೂರು: ಪ್ರತಿಯೊಬ್ಬರ ಬಾಳಿನಲ್ಲಿ ಶಿಕ್ಷಣ ಎಂಬುದು ಅತಿ ಪ್ರಮುಖದ ಘಟ್ಟವಾಗಿದೆ. ಇನ್ನು ಜೀವನಕ್ಕೆ ದಾರಿದೀಪವಾಗಿ ಬೆಳಕನ್ನು ತೋರಿಸುವವರು ಶಿಕ್ಷಕರು.  ಶಿಕ್ಷಕರ ದಿನಾಚರಣೆ ಪ್ರಯುಕ್ತ ಪ್ರತಿ ಶಾಲಾ ಕಾಲೇಜು ಸೇರಿದಂತೆ ಇನ್ನೂ ಹಲವಾರುಕಡೆಗಳಲ್ಲಿ ಶಿಕ್ಷಕರ ದಿನಾಚರಣೆಯನ್ನು ಇಂದು ಎಲ್ಲೆಡೆ ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಅದರಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಈಸಂದರ್ಭದಲ್ಲಿ ಪ್ರಾಥಮಿಕ‌ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು, ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು, ಶಿಕ್ಷಕರ‌ ಮತ್ತು ಉಪನ್ಯಾಸಕರ ಸಂಘಟನೆಗಳ ಪದಾಧಿಕಾತಿಗಳು ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ರಿಜ್ವಾನ್ ಅರ್ಷದ್ ವಹಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos