ಇಐಎಲ್ ನಲ್ಲಿ 96 ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಐಎಲ್ ನಲ್ಲಿ 96 ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, . 26, ನ್ಯೂಸ್ ಎಕ್ಸ್ ಪ್ರೆಸ್: ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್) ನೇಮಕಾತಿ 96 ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ ಸೈಟ್‌ ನಲ್ಲಿ ಪ್ರಕಟಣೆ ಹೊರಡಿಸಿದೆ

ಶೈಕ್ಷಣಿಕ ವಿದ್ಯಾರ್ಹತೆ: ಬಿ.ಇ /ಬಿ.ಟೆಕ್ / ಬಿ.ಎಸ್ಸಿ , ಡಿಪ್ಲೋಮ ಅಥವಾ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:  ಏ. 30,2019ರ ಅನ್ವಯ ಕನಿಷ್ಟ 48 ರಿಂದ ಗರಿಷ್ಟ 52 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,28,000/- ರಿಂದ 1,60,000 /-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಮಾಡಲಾಗುವುದು ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

 

ಫ್ರೆಶ್ ನ್ಯೂಸ್

Latest Posts

Featured Videos