ಚುನಾವಣೋತ್ತರ ಸಮೀಕ್ಷೆಗಳು ನಿಜವಾಗಿಲ್ಲ: ವಿಜಯ ಶಂಕರ್

ಚುನಾವಣೋತ್ತರ ಸಮೀಕ್ಷೆಗಳು ನಿಜವಾಗಿಲ್ಲ: ವಿಜಯ ಶಂಕರ್

ಮೈಸೂರು, ಮೇ. 21, ನ್ಯೂಸ್ ಎಕ್ಸ್ ಪ್ರೆಸ್:  ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸಿ.ಎಚ್.ವಿಜಯ ಶಂಕರ್ ಅವರು, ಚುನಾವಣೋತ್ತರ ಸಮೀಕ್ಷೆಗಳು ನಿಜವಾದ ಉದಾಹರಣೆಗಳು ಇಲ್ಲ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಕಳೆದ 2 ವರ್ಷಗಳ ಚುನಾವಣಾ ಸಮೀಕ್ಷೆಗಳನ್ನು ಗಮನಿಸಿ. ಚುನಾವಣೋತ್ತರ ಸಮೀಕ್ಷೆಗಳು ನಿಜವಾಗಿಲ್ಲ. ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳ ವಿಧಾನಸಭೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ ಅಂತ ಸಮೀಕ್ಷೆಗಳು ಹೇಳಿದ್ದವು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಹೀಗಾಗಿ ಸಮೀಕ್ಷೆಗಳನ್ನು ನಾವು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ವಿಜಯ ಶಂಕರ್ ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos