ಚುನಾವಣಾ ಕರ್ತವ್ಯದ ವೇಳೆ ಶಿಕ್ಷಕಿ ಸಾವು

ಚುನಾವಣಾ ಕರ್ತವ್ಯದ ವೇಳೆ ಶಿಕ್ಷಕಿ ಸಾವು

ಬೆಂಗಳೂರು: ಲೋಕಸಭೆ ಚುನಾವಣೆ 2024ರ ಮೊದಲನೇ ಹಂತದ ಮತದಾನ ನಡೆದ್ದಿದೆ. ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿತ್ತು. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ನಗರ ಸೇರಿ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆದಿದೆ.

ರಾಜ್ಯದಲ್ಲಿ ನಡೆದ ಲೋಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಶಾಲೆಯಲ್ಲಿ ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕವಿತಾ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ರೋಜಿಪುರ ಮತಗಟ್ಟೆ 155ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿ ಕವಿತಾ ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos