ಮೊದಲ ಹಂತದ ಲೋಕಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟ

ಮೊದಲ ಹಂತದ ಲೋಕಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟ

ಬೆಂಗಳೂರು, ಮಾ.16, ನ್ಯೂಸ್ ಎಕ್ಸ್ ಪ್ರೆಸ್ : ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಮಂಗಳವಾರ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 18ರಂದು 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಮಂಗಳವಾರ ಚುನಾವಣಾಧಿಕಾರಿಗಳು ಆಗಿರುವ ಆಯಾ ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ಮಾರ್ಚ್ 26ರ ತನಕ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಲು ಅವಕಾಶವಿದೆ. ಒಟ್ಟು 2 ಹಂತದಲ್ಲಿ ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತಿದೆ.

ಚುನಾವಣಾ ಅಧಿಸೂಚನೆ ಪ್ರಕಟವಾದ ಬಳಿಕ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಯಾವ ಪಕ್ಷವೂ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿಲ್ಲ. ಏಪ್ರಿಲ್ 18 ಮತ್ತು 23ರಂದು ರಾಜ್ಯದಲ್ಲಿ ಮತದಾನ ನಡೆಯಲಿದೆ.

ಮೂರು ಮೀಸಲು ಕ್ಷೇತ್ರಗಳು ಸೇರಿದಂತೆ ಒಟ್ಟು 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಮಂಗಳವಾರ ಅಧಿಸೂಚನೆ ಪ್ರಕಟವಾಗಲಿದೆ. ಎಲ್ಲಾ ಕ್ಷೇತ್ರಗಳು ಬೆಂಗಳೂರು ಮತ್ತು ಸುತ್ತಮತ್ತಲ ಜಿಲ್ಲೆಗಳಾಗಿವೆ. ಉತ್ತರ ಕರ್ನಾಟಕ ಭಾಗದಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಲಿದೆ.

ಫ್ರೆಶ್ ನ್ಯೂಸ್

Latest Posts

Featured Videos