ರಾಜ್ಯದಲ್ಲಿ ಏಪ್ರಿಲ್ 26, ಮೇ 7ರಂದು ಚುಣಾವಣೆ

ರಾಜ್ಯದಲ್ಲಿ ಏಪ್ರಿಲ್ 26, ಮೇ 7ರಂದು ಚುಣಾವಣೆ

ನವದೆಹಲಿ: ದೇಶದ ಸಾರ್ವತ್ರಿಕ ಲೋಕಸಭಾ ಚುನಾವಣೆ 2024ಕ್ಕೆ ದಿನಾಂಕ ಘೋಷಣೆ ಆಗಿದೆ. ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಭಾರತೀಯ ಚುನಾವಣೆ ಆಯೋಗವು ಚುನಾವಣೆ ದಿನಾಂಕ, ನಾಮಪತ್ರ ಸಲ್ಲಿಕೆ, ಪರಿಶೀಲನೆ, ಮತದಾನ ದಿನಾಂಕ ಸೇರಿದಂತೆ ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ಪ್ರಕಟಿಸಿದೆ. ಚುನಾವಣೆ ಘೋಷಣೆಯಾದ ಶನಿವಾರ  ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಭಾರತೀಯ ಚುನಾವಣೆ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.

ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಇಂದು ಪ್ರಕಟಿಸಿದ್ದು ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26ರಂದು ಮೊದಲ ಹಂತ ಮತ್ತು ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದೆ.

ಇದರೊಂದಿಗೆ ರಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ತೆರವಾಗಿರುವ ಸುರಪುರ ಕ್ಷೇತ್ರದ ಉಪಚುನಾವಣೆಯು ಅಂದೆ ನಡೆಯಲಿದೆ. ಇಂದು ಹೊಸದೆಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ದೇಶದಲ್ಲಿ ಒಟ್ಟು ಏಳು ಹಂತದಲ್ಲಿ ಮತದಾನ ನಡೆಯಲಿದ್ದು ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದ್ದು ಜೂನ್ 4 ರಂದು ಫಲಿತಾಂಶ ನಡೆಯಲಿದೆ ಎಂದು ರಾಜು ಕುಮಾರ್ ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos