ಎಲೆಕ್ಷನ್ ನಲ್ಲಿ ದಳ ಏಕಾಂಗಿ ಫೈಟ್

ಎಲೆಕ್ಷನ್ ನಲ್ಲಿ ದಳ ಏಕಾಂಗಿ ಫೈಟ್

ಬೆಂಗಳೂರು,ಅ. 21 : ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ ನಡೆಸಲಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡು ಭಾರೀ ಹಿನ್ನಡೆ ಅನುಭವಿಸಿದ ನ.ನಡೆಯುವ 14 ನಗರಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ನೊಂದಿ ಮೈತ್ರಿ ಮಾಡಿಕೊಳ್ಳದಿರಲು ತೀರ್ಮಾನಿಸಿದೆ.
ಆದರೆ ಅನಿವಾರ್ಯ ಹಾಗೂ ಅಗತ್ಯವಿರುವ ಕಡೆ ಮಾತ್ರ ಸ್ನೇಹಮಯ ಹೋರಾಟ ಮಾಡುವ ಬಗ್ಗೆಯೂ ಗಂಭೀರ ಚಿಂತನೆ ನಡೆಸಲಾಗಿದೆ. ಮುಂಬರುವ ವಿಧಾನಸಭೆ ಉಪಚುನಾವಣೆಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಈಗಾಗಲೇ ಜೆಡಿಎಸ್ ವರಿಷ್ಠರು ಸ್ಪಷ್ಟಪಡಿಸಿದ್ದಾರೆ. ಅದೇ ರೀತಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಚುನಾವಣಾಪೂರ್ವ ಹೊಂದಾಣಿಕೆ ಇಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಫ್ರೆಶ್ ನ್ಯೂಸ್

Latest Posts

Featured Videos