ಇತಿಹಾಸದಲ್ಲೇ ಮೊದಲ ಬಾರಿ ವಿಶೇಷ ದಾಖಲೆ ಬರೆದ ಎಲ್ಲಿಸ್ ಪೆರ್ರಿ

ಇತಿಹಾಸದಲ್ಲೇ ಮೊದಲ ಬಾರಿ ವಿಶೇಷ ದಾಖಲೆ ಬರೆದ ಎಲ್ಲಿಸ್ ಪೆರ್ರಿ

ದೆಹಲಿ: ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಆಟಗಾರ್ತಿ ಎಲ್ಲಿಸ್ ಪೆರ್ರಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಹಾಗೆಯೇ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ದಾಖಲೆ ಕೂಡ ಎಲ್ಲಿಸ್ ಪೆರ್ರಿ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಮರಿಝನ್ನೆ ಕಪ್ ಹೆಸರಿನಲ್ಲಿತ್ತು.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗದ ಬೌಲರ್ ಮರಿಝನ್ನೆ ಕಪ್ 2023 ರಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 15 ರನ್ ನೀಡಿ 5 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಎಲ್ಲಿಸ್ ಪೆರ್ರಿ ಅಳಿಸಿ ಹಾಕಿದ್ದಾರೆ.

ಆದರೆ ಎಲ್ಲಿಸ್ ಪೆರ್ರಿ 4 ಓವರ್​ಗಳಲ್ಲಿ ಕೇವಲ 15 ರನ್ ನೀಡಿ 6 ವಿಕೆಟ್​ ಕಬಳಿಸಿ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 6 ವಿಕೆಟ್ ಕಬಳಿಸಿದ ಮೊದಲ ಪ್ಲೇಯರ್ ಎಂಬ ಹೆಗ್ಗಳಿಕೆಗೂ ಎಲ್ಲಿಸ್ ಪೆರ್ರಿ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಆರ್​ಸಿಬಿ ಪರ ಅನಿಲ್ ಕುಂಬ್ಳೆ (5/5), ವನಿಂದು ಹಸರಂಗ (5/18), ಜಯದೇವ್ ಉನಾದ್ಕಟ್ (5/25), ಹರ್ಷಲ್ ಪಟೇಲ್ (5/27) ಹಾಗೂ ಆಶಾ ಸೋಬನಾ (5/22) ಐದು ವಿಕೆಟ್​ಗಳ ಸಾಧನೆ ಮಾಡಿದ್ದರು.

ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲೇ ಮೊದಲ ಬಾರಿ ಪ್ಲೇಯರ್ ಒಬ್ಬರು 6 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಆರ್​ಸಿಬಿ ಪರ ಎಲ್ಲಿಸ್ ಪೆರ್ರಿ ವಿಶೇಷ ದಾಖಲೆಯನ್ನೂ ಕೂಡ ಬರೆದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos