ಟಿಕೆಟ್ ಕೈ ತಪ್ಪಿದ ಆತಂಕ: ಭಾವನಾತ್ಮಕ ಭಾಷಣ ಮಾಡಿದ್ ಪ್ರತಾಪ್ ಸಿಂಹ..!

ಟಿಕೆಟ್ ಕೈ ತಪ್ಪಿದ ಆತಂಕ: ಭಾವನಾತ್ಮಕ ಭಾಷಣ ಮಾಡಿದ್ ಪ್ರತಾಪ್ ಸಿಂಹ..!

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ಕೈ ತಪ್ಪುವುದು ಬಹುತೇಕ ಖಚಿತವಾಗುತ್ತಿದ್ದಂತೆ‌ ಸಂಸದ ಪ್ರತಾಪ್ ಸಿಂಹ ಅವರು ಒಂದರ್ಥದಲ್ಲಿ ವಿದಾಯದ ಭಾಷಣ ಮಾಡಿದ್ದಾರೆ. ಅಲ್ಲದೆ, ಸ್ವ ಪಕ್ಷೀಯದವರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ.

ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಟಿಕೆಟ್ ಕೈ ತಪ್ಪಿರುವ ವಿಚಾರ ಪ್ರಸ್ತಾಪಿಸಿರುವ ಅವರು, ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ.‌

ನಾನು ಎಂದೂ ಪಲಾಯನವಾದಿಯಲ್ಲ. ನಾನು ಎಲ್ಲಿಗೂ ಓಡಿ ಹೋಗುವುದಿಲ್ಲ.‌ ನಾನು ಜನರ ಮಧ್ಯೆಯೇ ಇರುತ್ತೇನೆ. ಮುಂದೆ ಯಾರು ಎಂಪಿಯಾಗಿ ಬರುತ್ತಾರೋ‌ ಗೊತ್ತಿಲ್ಲ‌. ನಾನು ನಿಮ್ಮಗಳ ಜೊತೆ ಇರುತ್ತೇನೆ. ನಾನು ಈಗಲೂ ಹೇಳುತ್ತೇನೆ, ಮತ್ತೊಮ್ಮೆ ನನಗೆ ಬಿಜೆಪಿ ಟಿಕೆಟ್ ಕೊಟ್ಟರೆ 3 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆಂದು ಹೇಳುವ ಮೂಲಕ ಒಂದರ್ಥದಲ್ಲಿ ವಿದಾಯದ ಭಾಷಣ ಮಾಡಿದ್ದಾರೆ.‌

ಕೊಡಗು ಮೈಸೂರು ಬಿಜೆಪಿ ಭದ್ರ ಕೋಟೆ. ಇವತ್ತು ನನಗೆ ಟಿಕೆಟ್ ಕೊಟ್ರೆ ಮೂರು ಲಕ್ಷ ಮತಗಳಿಂದ ಗೆಲ್ಲುತ್ತೇನೆ. ಆಲ್ ಪಾರ್ಟಿ ಮೆಂಬರ್ ನಾನು. ಒಳ್ಳೆ ಕೆಲಸ ಮಾಡಿದ್ದೇನೆ ಪಕ್ಷಕ್ಕೆ ಕೆಲಸ ಮಾಡುತ್ತೇನೆ. ಅವಕಾಶ ಸಿಕ್ಕರೆ ಕೊಡಗಿನ ಜನರ ಋಣ ತೀರಿಸುತ್ತೇನೆ ಎಂದರು.

ಹಳೇ ಮೈಸೂರು ಭಾಗದಲ್ಲಿ ಸಿದ್ದರಾಮಯ್ಯ ‌ವಿರುದ್ಧ ತೊಡೆ ತಟ್ಟಿದ ಏಕೈಕ ವ್ಯಕ್ತಿ ಅಂದರೆ‌‌ ಅದು ನಾನು. ಸಿದ್ದರಾಮಯ್ಯ ವಿರುದ್ಧ ಮಾತನಾಡಲು ನಮ್ಮ ನಾಯಕರಿಗೆ ತೊಡೆ ನಡುಗುತ್ತೆ ಎಂದು ಸ್ವಪಕ್ಷದ ವಿರುದ್ಧ ಸಂಸದ ಪ್ರತಾಪ‌ಸಿಂಹ ವಾಗ್ದಾಳಿ ನಡೆಸಿದ್ದಾರೆ.‌

ನಿಮ್ಮ ಮನೆ ಕಾಯುವವರಿಗೆ ಟಿಕೆಟ್ ಕೊಡಬೇಕೆ ಹೊರತು ನಾವು ಅವರ ಮನೆ ಕಾಯುವ ಸ್ಥಿತಿ ಬರಬಾರದು ಎಂದು ಯದುವೀರ್ ವಿರುದ್ದ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಕಾರ್ಯಕರ್ತರೇ ನನ್ನ ದೊಡ್ಡ ಶಕ್ತಿ. ಯಾರು ತಲೆ ಕಡೆಸಿಕೊಳ್ಳಬೇಡಿ. ಗಟ್ಟಿ ಪಿಂಡ ನಾನು. ಯಾವ ಹಿನ್ನಲೆ ಇಲ್ಲದೆ ಇಲ್ಲಿ ತನಕ ಬಂದಿದ್ದೇನೆ. ನಾನು ಪಾರ್ಟಿಗೋಸ್ಕರ ಬಾವುಟ ಕಟ್ಟುತ್ತೇನೆ. ಕೈ ಮುಗಿದು ಬೇಡಿಕೊಳ್ಳುತ್ತೇನೆ ಲೀಡರ್ ಗಳ ಹಿಂದೆ ಹೋಗಬೇಡಿ. ಪಕ್ಷದ ಜೊತೆ ಹೋಗಿ. ಅಪಪ್ರಚಾರ ಮಾಡಬೇಡಿ. ನಾನೇ ಆಗಲಿ ಮತ್ತೊಬ್ಬರೇ ಆಗಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸೋಣ ಎಂದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos