ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವುದು: ಡಿಸಿಎಂ

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವುದು: ಡಿಸಿಎಂ

ಬೆಂಗಳೂರು,ಡಿ 18: ಕರ್ನಾಟಕ ರಾಜ್ಯದಲ್ಲಿ ನಮ್ಮ ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ನಡೆದ ನವೋದ್ಯಮ, ಉದ್ಯಮಗಳ ಜೊತೆ ಸಂವಾದದಲ್ಲಿ ಮಾತನಾಡಿದ ಡಿಸಿಎಂ ಅಶ್ವತ್ಥ ನಾರಾಯಣ, ತಂತ್ರಜ್ಞಾನದಲ್ಲಿ ಕನ್ನಡ ಬಳಕೆ ಮತ್ತು ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದರು.

ಈಗಾಗಲೇ ಕರ್ನಾಟಕ ಅನ್ವೇಷಣಾ ಪ್ರಾಧಿಕಾರ ರಚಿಸಲಾಗಿದೆ. ಹೊಸ ಆವಿಷ್ಕಾರಗಳಿಗೆ ಪ್ರೋತ್ಸಾಹ ನೀಡಲು ವಿಶೇಷ ಕಾನೂನು ಜಾರಿಗೆ ತರುವ ಮೂಲಕ ವಿಶ್ವದಲ್ಲೇ ಈ ರೀತಿಯ ಕಾನೂನು ರೂಪಿಸಿದ ಮೊದಲ ರಾಜ್ಯ ಎಂಬ ಕೀರ್ತಿಗೆ ನಮ್ಮ ಸರ್ಕಾರ ಪಾತ್ರವಾಗಿದೆ ಎಂದು ವಿವರಿಸಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos