ಹೈಕಮಾಂಡ್ ಹೇಳಿದರೆ ಬೀದರ್ ಕ್ಷೇತ್ರದಿಂದ ಸ್ಪರ್ಧೆ: ಖಂಡ್ರೆ

ಹೈಕಮಾಂಡ್ ಹೇಳಿದರೆ ಬೀದರ್ ಕ್ಷೇತ್ರದಿಂದ ಸ್ಪರ್ಧೆ: ಖಂಡ್ರೆ

ಬೆಂಗಳೂರು,ಮಾ.13, ನ್ಯೂಸ್ ಎಕ್ಸ್ ಪ್ರೆಸ್: ಹೈಕಮಾಂಡ್ ಸೂಚನೆ ನೀಡಿದರೆ ಬೀದರ್ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ತಾವು ಸಿದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಮಾ.16ರಂದು ನವದೆಹಲಿಯಲ್ಲಿ ನಡೆಯುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಸದ್ಯಕ್ಕೆ ತಮಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಯಾವುದೇ ಸೂಚನೆ ಬಂದಿಲ್ಲ. ಹೈಕಮಾಂಡ್ ಸೂಚಿಸಿದರೆ ಸ್ಪರ್ಧಿಸಲು ಸಿದ್ಧ ಎಂದರು.

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಭದ್ರವಾಗಿದೆ. ಮಂಡ್ಯದಲ್ಲಿನ ಗೊಂದಲಗಳಿಗೆ ವರಿಷ್ಠರು ಪರಿಹಾರ ಸೂಚಿಸುತ್ತಾರೆ. ಮಂಡ್ಯ ಚುನಾವಣೆ ಕುರಿತಂತೆ ಯಾರು ಬಹಿರಂಗ ಹೇಳಿಕೆ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ಮಾ.18ಕ್ಕೆ ಕಲಬುರಗಿಗೆ ಆಗಮಿಸುತ್ತಿದ್ದು, ಅಂದಿನ ಕಾರ್ಯಕ್ರಮಕ್ಕೆ ಸುಮಾರು 2 ಲಕ್ಷ ಜನ ಸಮಾವೇಶಗೊಳ್ಳುವ ನಿರೀಕ್ಷೆ ಇದೆ ಎಂದು ಈಶ್ವರ್ ಖಂಡ್ರೆ ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos