ಮತ್ತೆ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ್ಪ

ಮತ್ತೆ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ್ಪ

ಶಿವಮೊಗ್ಗ: ಕಾಂತೇಶ್ ಗೆ ಟಿಕೆಟ್ ಕೊಡದಂಗೆ ಮೋಸ ಮಾಡಿದ್ದೆ ಬಿಎಸ್ ಯಡಿಯೂರಪ್ಪ. ಯಡಿಯೂರಪ್ಪ ಮಾತು ಕೇಳಿ ನನ್ನ ಮಗ ಮೋಸ ಹೋಗಿದ್ದಾನೆ ಎಂದು ಯಡಿಯೂರಪ್ಪ ವಿರುದ್ಧ ಬಿಜೆಪಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇದೀಗ ಮತ್ತೆ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಹಾಗೂ ವಿಜಯೇಂದ್ರ ಕುತಂತ್ರದಿಂದಲೇ ತನ್ನ ಮಗ ಕಂತೇಶ್ ಗೆ ಟಿಕೆಟ್ ಕೈತಪ್ಪಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಕಾಂತೇಶ್ ಗೆ ಟಿಕೆಟ್ ಕೊಡಿಸುವ ಬಗ್ಗೆ ಮಾತನಾಡಲು ಯಡಿಯೂರಪ್ಪನವರ ಮನೆಗೆ ಹೋದಾಗ, ಟಿಕೆಟ್ ಕೊಡಿಸುವುದು ಮಾತ್ರವಲ್ಲ ಕ್ಷೇತ್ರದ ತುಂಬಾ ನಾನೇ ಓಡಾಡಿ ಕಾಂತೇಶ್ ಗೆಲುವಿಗೆ ಶ್ರಮಿಸುವುದಾಗಿ ಹೇಳಿದ್ದರು.

ಈಗ ಟಿಕೆಟ್ ಕೈತಪ್ಪಿರುವುದು ಷಡ್ಯಂತ್ರವಲ್ಲದೇ ಮತ್ತಿನ್ನೇನು? ಎಂದು ಪ್ರಶ್ನಿಸಿದರು. ಕೇಂದ್ರದ ನಾಯಕರು ವಿನಾಕಾರಣ ತಂದೆ ಹಾಗೂ ಮಕ್ಕಳಿಗೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. ಅದನ್ನು ಇವರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಕಾಂತೇಶ್ ಗೆ ಟಿಕೆಟ್ ಕೈತಪ್ಪಲು ತಂದೆ-ಮಕ್ಕಳೇ ಕಾರಣ ಎಂದು ಆರೋಪಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos