ಬ್ರಹ್ಮ ಹೇಳಿದರೂ ಪಕ್ಷೇತರ ಸ್ಪರ್ಧೆ ವಾಪಸ್ ಪಡೆಯೊಲ್ಲ: ಈಶ್ವರಪ್ಪ

ಬ್ರಹ್ಮ ಹೇಳಿದರೂ ಪಕ್ಷೇತರ ಸ್ಪರ್ಧೆ ವಾಪಸ್ ಪಡೆಯೊಲ್ಲ: ಈಶ್ವರಪ್ಪ

ಬೆಂಗಳೂರು: ಇಂದು ಶಿವಮೊಗ್ಗದಲ್ಲಿ ಮಾಧ್ಯಮಗೋಷ್ಠಿ ಆಯೋಜಿಸಿ ಮಾತನಾಡಿದ ಅವರು, ಶಿವಮೊಗ್ಗಕ್ಕೆ ಬ್ರಹ್ಮ ಬಂದರೂ ಬಂಡಾಯ ವಾಪಸ್ ಪಡೆಯುವುದಿಲ್ಲ. ಕೇವಲ ಬಂಡಾಯ ಅಲ್ಲ ಚುನಾವಣೆಯಲ್ಲಿ ಗೆಲ್ಲುತ್ತೇನೆ. ಮನೆಯಲ್ಲಿ ಒಬ್ಬರು ಕೇಂದ್ರ ಚುನಾವಣಾ ಸಮಿತಿ ಸದಸ್ಯರ ಜೊತೆಗೆ, ಆರು ತಿಂಗಳು ಹಠ ಹಿಡಿದು ಮಗನನ್ನು ರಾಜ್ಯದ ಬಿಜೆಪಿ ಅಧ್ಯಕ್ಷನಾಗಿ ಮಾಡಿದರು. ರಾಜ್ಯದಲ್ಲಿ ಪ್ರತಾಪ್ ಸಿಂಹ, ಬಸವನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ ಹಾಗೂ ಸದಾನಂದ ಗೌಡ ಎಲ್ಲರಿಗೂ ಅಪಮಾನ ಮಾಡಿದ್ದಾರೆ. ಬಿ ವೈ ವಿಜೇಂದ್ರ ರಾಜ್ಯಾಧ್ಯಕ್ಷರಾಗುತ್ತಿದ್ದಂತೆ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದರು ಎಂದು ಕಿಡಿಕಾರಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನನ್ನ ನಿರೀಕ್ಷೆಗೂ ಮೀರಿ ಬೆಂಬಲ ಸಿಗುತ್ತಿದೆ. ಬಿಜೆಪಿ ನಿಮ್ಮ ನೋವಿಗೆ ಸ್ಪಂದಿಸುತ್ತಿಲ್ಲ. ಕಾಯಕರ್ತರ ನೋವಿಗೆ ಸ್ಪಂದಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ  ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಬೆಂಬಲವೂ ಸಿಗುತ್ತಿದೆ. ಬಂಡಾಯ ಸ್ಪರ್ಧೆ ಮಾಡಿ ಗೆದ್ದು ಪ್ರಧಾನಿ ಮೋದಿಗೆ ಬೆಂಬಲ ವ್ಯಕ್ತಪಡಿಸುತ್ತೇನೆ. ಇದೇ 28ರಂದು ಬೆಳಗ್ಗೆ ನನ್ನ ಚುನಾವಣಾ ಪ್ರಚಾರದ ಕಾರ್ಯಾಲಯ ಉದ್ಘಾಟನೆ ಮಾಡುತ್ತೇನೆ.

ರಾಜ್ಯ ಬಿಜೆಪಿಯಲ್ಲಿ ಯಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪದಾಧಿಕಾರಿಗಳ ಆಯ್ಕೆ ನಡೆದಿಲ್ಲ. ಬಿಎಸ್ ಯಡಿಯೂರಪ್ಪ ನನ್ನ ಮಗನಿಗೆ ಹಾವೇರಿ ಟಿಕೆಟ್ ಕೊಡಿಸುತ್ತೇನೆ ಪ್ರವಾಸ ಮಾಡಿ ಗೆಲ್ಲಿಸುತ್ತೇನೆ ಎಂದಿದ್ದರು. ಟಿಕೆಟ್ ಘೋಷಣೆಗೂ ಮುನ್ನ ರಾಘವೇಂದ್ರ ಅವರು ಕಾಂತೇಶ್ ಅವರಿಗೆ ಫೋನ್ ಮಾಡಿ ದೇವರಾಣೆಗೂ ನಿನಗೆ ಟಿಕೆಟ್ ಸಿಗುತ್ತೆ ಎಂದಿದ್ದರು. ಯಡಿಯೂರಪ್ಪ ನನ್ನ ಮೊಬೈಲ್ ಗೆ ಕರೆ ಮಾಡಿ, ದೆಹಲಿಗೆ ಹೋಗೋಣ ಬಾ ಎಂದರು. ನಾನು ಬರಲ್ಲ ಶೋಭಾನ ಕರೆದುಕೊಂಡು ಹೋಗಿ ಎಂದಿದ್ದೆ. ಕೇಂದ್ರ ಚುನಾವಣಾ ಸಮಾಚಾರ ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂದು ಹೇಳಿದ್ದರು. ಈಗ ನೀರಿಗಿಳಿದ ಮೇಲೆ ಮಳೆಯೇನು? ಚಳಿಯೇನು? ನೇರವಾಗಿ ತೊಡೆ ತಟ್ಟಿದ್ದೇನೆ ಎಂದು ಆಕ್ರೋಶ ಹೊರ ಹಾಕಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯ ಪ್ರಕಾಶ್ ನಡ್ಡಾ ನನಗೆ ಫೋನ್ ಮಾಡಿಲ್ಲ. ಯಾರೇ ಹೇಳಿದರೂ ನಾನು ಸ್ಪರ್ಧೆ ಮಾಡಿಯೇ ತೀರುತ್ತೇನೆ. ದಯಮಾಡಿ ನನ್ನನ್ನು ಯಾರು ರೇಗಿಸಿ, ಕೋಪ ತರಿಸಬೇಡಿ. ಯಾರೇ ಕರೆ ಮಾಡಿದರು ನನ್ನ ಬಂಡಾಯ ಸ್ಪರ್ಧೆ ಖಚಿತವಾಗಿದೆ. ನನ್ನ ರಕ್ತ ಇರುವುದೇ ಬಿಜೆಪಿಯಲ್ಲಿ ನನ್ನ ತಾಯಿಂದ ನನ್ನನ್ನು ಯಾರು ದೂರ ಮಾಡಲು ಸಾಧ್ಯವಿಲ್ಲ. ನನ್ನ ಮತ್ತು ನನ್ನ ತಾಯಿಯ ಸಂಬಂಧ ಯಾವುದೇ ಶಕ್ತಿಯಿಂದ ದೂರ ಮಾಡಲು ಸಾಧ್ಯವಿಲ್ಲ. ಒಬ್ಬ ವ್ಯಕ್ತಿಯ ಹಿಡಿತದಲ್ಲಿ ಪಕ್ಷ ಇರುವ ಸಂದರ್ಭದಲ್ಲಿ ಆ ವ್ಯಕ್ತಿಯನ್ನು ಸೋಲಿಸಬೇಕಿದೆ. ರಾಷ್ಟ್ರಭಕ್ತರ ಮುಸಲ್ಮಾನರು ನನ್ನ ಅದೃಶ್ಯ ಮತದಾರ ಪಟ್ಟಿಯಲ್ಲಿದ್ದಾರೆ. ಅವರು ನನಗೆ ಓಟು ಹಾಕುತ್ತಾರೆ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos