ಇಎಸ್ಐಸಿ ನೇಮಕಾತಿ

ಇಎಸ್ಐಸಿ ನೇಮಕಾತಿ

ಕಲಬುರಗಿ, ಜೂನ್.1, ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯ ನೌಕರರ ವಿಮಾ ನಿಗಮ 41 ಜ್ಯೂನಿಯರ್ ರೆಸಿಡೆಂಡ್ ಮತ್ತು ಟ್ಯೂಟರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ.

ಅಭ್ಯರ್ಥಿಗಳು ಜೂನ್ 6 ಮತ್ತು 7,2019 ರಂದು ನಡೆಯುವ ವಾಕ್-ಇನ್ ಇಂಟರ್ ವ್ಯೂ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ: ಎಂಬಿಬಿಎಸ್ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಗರಿಷ್ಠ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 76,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನ ನಡೆಯುವ ಸ್ಥಳ: ರಾಜ್ಯ ನೌಕರರ ವಿಮಾ ನಿಗಮ, ಇಎಸ್ಐಸಿ ಮೆಡಿಕಲ್ ಕಾಲೇಜು ಮತ್ತು ಆಸ್ಟತ್ರೆ, ಗುಲ್ಬರ್ಗಾ, ಕರ್ನಾಟಕ.

 

ಫ್ರೆಶ್ ನ್ಯೂಸ್

Latest Posts

Featured Videos