ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ

ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ

ಬೆಂಗಳೂರು: ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸುವ ಜತೆಗೆ ೧೦೦೦ ಕೋಟಿ ರೂ. ಅನುದಾನ ಮೀಸಲಿಡಬೇಕು ಎಂದು ಸ್ಫಟಿಕಪುರಿ ಮಹಾಸಂಸ್ಥಾನದ ನಂಜಾವಧೂತ ಸ್ವಾಮೀಜಿ ಆಗ್ರಹಿಸಿದರು.
ಒಕ್ಕಲಿಗರ ಸಂಘದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮುದಾಯದ ೧೧೦ ಉಪಜಾತಿಗಳನ್ನು ಕೇಂದ್ರ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು ಎಂದರು.
ಅದರೊಂದಿಗೆ ಬುಡಕಟ್ಟು ಜನರಂತೆ ಜೀವನ ನಡೆಸುತ್ತಿರುವ ಸಮುದಾಯದ ಉಪಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ವೈಜ್ಞಾನಿಕ ಸಮೀಕ್ಷೆ ನಡೆಸಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಮುದಾಯದ ಎಲ್ಲ ಮುಖಂಡರ ಸಭೆ ನಡೆಸಿ ದೊಡ್ಡ ತೀರ್ಮಾನ ಕೈಗೊಳ್ಳಲು ಸರ್ಕಾರ ಅವಕಾಶ ನೀಡಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಫ್ರೆಶ್ ನ್ಯೂಸ್

Latest Posts

Featured Videos