ಸುಪ್ರೀಂ ಕೋರ್ಟ್ ಮಾಜಿ ಉದ್ಯೋಗಿಯಿಂದ ಸಿಜೆಐ ರಂಜನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ..!?

ಸುಪ್ರೀಂ ಕೋರ್ಟ್ ಮಾಜಿ ಉದ್ಯೋಗಿಯಿಂದ ಸಿಜೆಐ ರಂಜನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ..!?

ನವದೆಹಲಿ, ಏ. 20, ನ್ಯೂಸ್ ಎಕ್ಸ್ ಪ್ರೆಸ್: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ವಿರುದ್ಧವೇ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಸುಪ್ರೀಂಕೋರ್ಟ್‌ನ ಮಾಜಿ ಉದ್ಯೋಗಿಯಾಗಿರುವ ಮಹಿಳೆಯೊಬ್ಬರು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ಎಲ್ಲ ನ್ಯಾಯಮೂರ್ತಿಗಳಿಗೂ ಶುಕ್ರವಾರ (ಏಪ್ರಿಲ್ 19) ಅಫಿಡವಿಟ್ ಸಲ್ಲಿಸಿದ್ದಾರೆ. ಆದರೆ ಈ ಆರೋಪದ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ರಂಜನ್ ಗೊಗೊಯ್, ತಾವು ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ತಮ್ಮ ಬಳಿ ಲೈಂಗಿಕ ಸಹಕಾರದ ಬೇಡಿಕೆ ಇರಿಸಿದ್ದರು. ಅದಕ್ಕೆ ತಾವು ಒಪ್ಪದ ಕಾರಣಕ್ಕೆ ಕೆಲಸದಿಂದ ವಜಾಗೊಳಿಸಲಾಯಿತು. ಮಾತ್ರವಲ್ಲ, ಪೊಲೀಸ್ ಇಲಾಖೆಯಲ್ಲಿದ್ದ ಪತಿ ಮತ್ತು ಅವರ ಸಹೋದರರನ್ನೂ ನೌಕರಿಯಿಂದ ಕಿತ್ತು ಹಾಕಲಾಯಿತು. ಇದಾದ ಬಳಿಕ ಎರಡು ವರ್ಷದ ಹಿಂದೆ ಸುಪ್ರೀಂಕೋರ್ಟ್‌ನಲ್ಲಿ ಕೆಲಸ ಕೊಡಿಸುವುದಾಗಿ ವ್ಯಕ್ತಿಯೊಬ್ಬನಿಂದ ಹಣ ಪಡೆದುಕೊಂಡಿರುವುದಾಗಿ ಆರೋಪಿಸಿ ದೂರು ದಾಖಲಿಸಿ ಮಾರ್ಚ್‌ ತಿಂಗಳಿನಲ್ಲಿ ಬಂಧಿಸಿ ಹಿಂಸಿಸಲಾಯಿತು ಎಂದು ಮಹಿಳೆ ಆರೋಪಿಸಿದ್ದಾರೆ. ಈ ಪ್ರಕರಣದ ಕುರಿತಂತೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಮತ್ತು ಸಂಜೀವ್ ಖನ್ನಾ ಸಭೆ ಸೇರಿ ಚರ್ಚೆ ನಡೆಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos