5,8,9,11ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೂ ಮೊದಲೇ ಸುಪ್ರೀಂಕೋರ್ಟ್ ತಡೆ

5,8,9,11ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೂ ಮೊದಲೇ ಸುಪ್ರೀಂಕೋರ್ಟ್ ತಡೆ

ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಇಲಾಖೆ ನಡೆಸಿದ್ದ5,8,9,11ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಸದ್ಯ ಯಾವುದೇ ಶಾಲೆಗಳು ಸಹ ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದ ವರೆಗೆ ಕಾಯಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5, 8, 9ನೇ ಹಾಗೂ 11 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಮಾರ್ಚ್ ನಲ್ಲಿ ಶಿಕ್ಷಣ ಇಲಾಖೆ ಬೋರ್ಡ್ 5,8,9,11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಿತ್ತು. ಈ ನಡುವೆ ಬೋರ್ಡ್ ಪರೀಕ್ಷೆ ನಡೆಸದಂತೆ ಕೋರಿ ರುಪ್ಸಾ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.  ಮೌಲ್ಯಮಾಪನ ಬೇಕಾಬಿಟ್ಟಿ ಮಾಡಲಾಗಿದೆ. ಮೌಲ್ಯ ಮಾಪನದಲ್ಲಿ ದೋಷವಾಗಿದೆ ಎಂದು ರುಪ್ಸಾ ಆರೋಪಿಸಿತ್ತು. ಇದೀಗ ಬೋರ್ಡ್ ಎಕ್ಸ್ ನ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

 

ಫ್ರೆಶ್ ನ್ಯೂಸ್

Latest Posts

Featured Videos