ನೆರೆ ಪರಿಹಾರಕ್ಕೆ ಹೆಚ್ಚುವರಿ ಹಣ: ಸಿಎಂ

ನೆರೆ ಪರಿಹಾರಕ್ಕೆ ಹೆಚ್ಚುವರಿ ಹಣ: ಸಿಎಂ

ವಿಜಯಪುರ, ಅ. 5: ಉತ್ತರ ಕರ್ನಾಟಕ ಪ್ರವಾಹ ಸಮೀಕ್ಷೆ ಸಂಪೂರ್ಣವಾಗಿದ್ದು, ನೆರೆ ಪರಿಹಾರ ಕಾಮಗಾರಿಗಳಿಗೆ ಹೆಚ್ಚುವರಿ ಹಣ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಯಡಿಯೂರಪ್ಪ, “ನೆರೆ ಪರಿಹಾರ ಕಾರ್ಯಕ್ಕೆ ರಾಜ್ಯ ಸರ್ಕಾರ ಈಗಾಗಲೇ 2,500 ಕೋಟಿ ಹಣ ಬಿಡುಗಡೆ ಮಾಡಿದೆ. ಕೇಂದ್ರದಿಂದ ತಾತ್ಕಾಲಿಕವಾಗಿ 1,200 ಕೋಟಿ ಹಣ ಬಿಡುಗಡೆಯಾಗಿದೆ. ಪ್ರವಾಹ ಪರಿಹಾರ ಕಾಮಗಾರಿಗಳ ಕುರಿತು ನಿನ್ನೆ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿದ್ದು, ಅವರ ಬಳಿ ಸಾಕಷ್ಟು ಹಣವಿದೆ. ಅವಶ್ಯಕತೆ ಇದ್ದರೆ ಹೆಚ್ಚುವರಿ ಹಣ ಬಿಡುಗಡೆ ಮಾಡಲು ಆದೇಶಿಸುತ್ತೇನೆ” ಎಂದಿದ್ದಾರೆ.

ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸುವ ಕುರಿತು ಮಾತನಾಡಿದ ಅವರು, “ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ರಾಜ್ಯದ ಹಣ ಹಾಗೂ ನೀರನ್ನು ಸದ್ಬಳಕೆ ಮಾಡಿಕೊಳ್ಳುತ್ತೇವೆ. ಹೀಗಾಗಿ ಮುಂದಿನ ಬಜೆಟ್ನಲ್ಲಿ ಆಲಮಟ್ಟಿ ಸಂತ್ರಸ್ತರಾಗುವ 20 ಹಳ್ಳಿಗಳಿಗೆ 20,000 ಕೋಟಿ ಮೀಸಲಿಡಲಾಗುವುದು” ಎಂದು ಮಾಹಿತಿ ನೀಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos