ಆಸ್ಟ್ರೇಲಿಯಾ ಮತ್ತು ನೆದರ್ಲೆಂಡ್ಸ್ ಮುಖಾಮುಖಿ!

ಆಸ್ಟ್ರೇಲಿಯಾ ಮತ್ತು ನೆದರ್ಲೆಂಡ್ಸ್ ಮುಖಾಮುಖಿ!

ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ 24ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ನೆದರ್ಲೆಂಡ್ಸ್ ಮುಖಾಮುಖಿಯಾಗಿದೆ. ಈ ಪಂದ್ಯ ಅತ್ಯಂತ ರೋಚಕದಿಂದ ಕೂಡಿದೆ ಏಕೆಂದರೆ ಈ ಪಂದ್ಯ ಇವರಿಬ್ಬರಿಗೂ ಬಹಳ ಮುಖ್ಯವಾದ ಪಂದ್ಯವಾಗಿದೆ.

2023ರ ಏಕದಿನ ವಿಶ್ವಕಪ್‌ನಲ್ಲಿಇಂದು ಆಸ್ಟ್ರೇಲಿಯಾ ಮತ್ತು ನೆದರ್ಲೆಂಡ್ಸ್ ನಡುವೆ ಪಂದ್ಯ ನಡೆಯುತ್ತಿದೆ. ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಗೆಲ್ಲುವ ಫೆವರೇಟ್ ಎನಿಸಿದರೂ, ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ನೆದರ್ಲೆಂಡ್ಸ್ ಕೂಡ ಆತ್ಮವಿಶ್ವಾಸದಿಂದ ಬೀಗುತ್ತಿದೆ. ಆದ್ದರಿಂದ ಈ ಪಂದ್ಯದಲ್ಲಿ ಯಾವುದೇ ತಂಡವನ್ನು ಕಡಿಮೆ ಅಂದಾಜು ಮಾಡುವಂತಿಲ್ಲ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದರೆ ಸೆಮಿಫೈನಲ್ ಹಾದಿ ಸುಲಭವಾಗಲಿದೆ. ಆರಂಭಿಕ ಎರಡು ಪಂದ್ಯಗಳಲ್ಲಿ ಸೋತ ನಂತರ, ಆಸ್ಟ್ರೇಲಿಯಾ ಅದ್ಭುತ ಪುನರಾಗಮನವನ್ನು ಮಾಡಿದೆ.

ಆಸ್ಟ್ರೇಲಿಯಾ ತಂಡ ಪ್ರಸ್ತುತ ನಾಲ್ಕು ಪಾಯಿಂಟ್‌ಗಳೊಂದಿಗೆ ಪಾಯಿಂಟ್‌ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದು, ಅದರ ನಿವ್ವಳ ರನ್ ರೇಟ್ -0.193 ಆಗಿದೆ. ಸದ್ಯ ಇಂಜುರಿಯಿಂದ ಚೇತರಿಸಿಕೊಂಡಿರುವ ಟ್ರಾವಿಸ್ ಹೆಡ್ ತಂಡಕ್ಕೆ ಮರಳುವುದು ಸನ್ನಿಹಿತವಾಗಿದೆ. ಹೀಗಾಗಿ ಹೆಡ್ ಅವರ ಸೇರ್ಪಡೆಯು ಮಿಚೆಲ್ ಮಾರ್ಷ್ ಅವರ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆಗೆ ಕಾರಣವಾಗಬಹುದು. ಹೆಡ್ ಅನುಪಸ್ಥಿತಿಯಲ್ಲಿ ಪ್ರಸ್ತುತ ಡೇವಿಡ್ ವಾರ್ನರ್ ಅವರೊಂದಿಗೆ ಮಾರ್ಷ್​ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos