‘ಫ್ಯಾಕ್ಟ್ ಚೆಕ್’ ಕಾನೂನಿನ ವಿರುದ್ಧ ಹೋಗುವುದಿಲ್ಲ: ಪ್ರಿಯಾಂಕ್ ಖರ್ಗೆ

‘ಫ್ಯಾಕ್ಟ್ ಚೆಕ್’ ಕಾನೂನಿನ ವಿರುದ್ಧ ಹೋಗುವುದಿಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಶ ಮತ್ತು ಇತರೆ ಸುಳ್ಳು ಸುದ್ದಿಗಳನ್ನು ಹರಡಿ ಸಮಾಜದಲ್ಲಿ ಗೊಂದಲಗಳನ್ನು ಹರಡುತ್ತಿರುವುದನ್ನು ಕಡಿವಾಣ ಹಾಕಲು ರಾಜ್ಯ ಸರ್ಕಾರ ‘ಫ್ಯಾಕ್ಟ್ ಚೆಕ್’ ಘಟಕ ಸ್ಥಾಪಿಸಲು ಮುಂದಾಗಿರುವ ನಿರ್ಧಾರಕ್ಕೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ವಿರೋಧ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರು ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮ ಸಂಸ್ಥೆಗಳು ಪೋಸ್ಟ್ ಮಾಡಿದ ವರದಿಗಳು ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ‘ನಕಲಿ ಸುದ್ದಿ’ಗಳ ಹವಾಳಿ ಮೇಲೆ ನಿಗಾ ಇಡಲು ರಾಜ್ಯದಲ್ಲಿ ‘ಫ್ಯಾಕ್ಟ್ ಚೆಕ್’ ಘಟಕ ಸ್ಥಾಪಿಸಲು ನಿರ್ಧರಿಸಲಾಗಿದೆ, ಈ ಘಟಕಸ್ಥಾಪಿಸಲು ಕಾನೂನು ವಿರುದ್ಧ ಹೋಗುವುದಿಲ್ಲ ಸುಳ್ಳು ಸುದ್ದಿ ಹರಡುವವರಿಗೆ ಮಾತ್ರ ಕಾನೂನು ಅಡಿಯಲ್ಲಿ ಕ್ರಮ ಕೈಗೊಳ್ಳಲು ಮುಂದಾಗುವುದು ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಉತ್ತರಪ್ರದೇಶ ಸರ್ಕಾರವಲ್ಲ. ನಮ್ಮ ಸರ್ಕಾರ ಕಾನೂನಿಗೆ ವಿರುದ್ಧವಾಗಿ ಏನನ್ನೂ ಮಾಡುವುದಿಲ್ಲ. ಸರ್ಕಾರದ ನಿರ್ಣಯ ಕುರಿತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾಗೆ ಪತ್ರ ಬರೆಯುತ್ತೇನೆಂದು ಹೇಳಿದರು.
ಆನ್ಲೈನ್ ನಲ್ಲಿ ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳ ಸಮಸ್ಯೆ ಇರುವುದು ನಿಜ. ಆದರೆ ಅಂತಹ ವಿಷಯವನ್ನು ಗುರುತಿಸುವ ಹಾಗೂ ತೆಗೆದುಹಾಕುವ ಪ್ರಯತ್ನಗಳನ್ನು ಸರಕಾರದ ವ್ಯಾಪ್ತಿಯಲ್ಲಿಲ್ಲದ ಸ್ವತಂತ್ರ ಸಂಸ್ಥೆಗಳು ಮುನ್ನಡೆಸಬೇಕು. ಇಲ್ಲದಿದ್ದರೆ ಅದು ಭಿನ್ನಾಭಿಪ್ರಾಯದ ಧ್ವನಿಗಳನ್ನು ಹತ್ತಿಕ್ಕುವ ಸಾಧನಗಳಾಗುತ್ತವೆ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಹೇಳಿದೆ.
ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಯವರು ನಿಷ್ಪಕ್ಷಪಾತವಾಗಿ, ಪಾರದರ್ಶಕ ಸುದ್ದಿಗಳನ್ನು ಕೊಡಲು ನ್ಯಾಯಪರ ತತ್ವಗಳನ್ನು ಪಾಲಿಸಬೇಕು ಇಲ್ಲವಾದಲ್ಲಿ ಸಮಾಜದ ಸ್ವಾಸ್ತ್ಯ ಹಾಳಾಗುತ್ತದೆ ಎಂದು ಹೇಳಿದರು. ಅಲ್ಲದೆ, ಉದ್ದೇಶಿತ ಸತ್ಯ-ಪರಿಶೀಲನಾ ಘಟಕದ ವ್ಯಾಪ್ತಿ ಹಾಗೂ ಅಧಿಕಾರಗಳು ಮತ್ತು ಅದು ಕಾರ್ಯನಿರ್ವಹಿಸುವ ಆಡಳಿತ ಕಾರ್ಯವಿಧಾನವನ್ನು ಸ್ಪಷ್ಟವಾಗಿ ನಿರ್ದಿಷ್ಟಪಡಿಸಲು ಸರ್ಕಾರಕ್ಕೆ ಒತ್ತಾಯಿಸಿತ್ತು.

ವರದಿ
ಮಂಜುನಾಥ.ಲಕ್ಕಿಮರ(ವಿಜಯನಗರ)

ಫ್ರೆಶ್ ನ್ಯೂಸ್

Latest Posts

Featured Videos