ಸಿಎಂ ಆಗಿ ಫಡ್ನವಿಸ್ ಪ್ರಮಾಣವಚನ

ಸಿಎಂ ಆಗಿ ಫಡ್ನವಿಸ್ ಪ್ರಮಾಣವಚನ

ಮುಂಬೈ, ನ. 23 : ಮಹಾರಾಷ್ಟ್ರದ ಮತ್ತೆ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿಯಾಗಿ ಮತ್ತೆ ದೇವೇಂದ್ರ ಫಡ್ನವಿಸ್ ಪದಗ್ರಹಣ ಮಾಡಿದ್ದು, ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಅವರು ಪ್ರಮಾಣವಚಣ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲರ ಸಮ್ಮುಖದಲ್ಲಿ ಇಂದು ದೇವೇಂದ್ರ ಫಡ್ನವಿಸ್ ಹಾಗೂ ಅಜಿತ್ ಪವಾರ್ ಪದಗ್ರಹಣ ಮಾಡಿದ್ದಾರೆ.
ಶಿವ ಸೇನೆ ಬೇಡಿಕೆ
ಹೆಚ್ಚು ಸ್ಥಾನ ಗೆದ್ದ ಬಿಜೆಪಿ ಜೊತೆ ಕೈಜೊಡಿಸಿ ಸರ್ಕಾರ ಮಾಡಲು ಶಿವಸೇನೆ ಹೆಚ್ಚು ಬೇಡಿಕೆಗಳನ್ನು ಮುಂದಿಟ್ಟಿತ್ತು. ಸಿಎಂ ಸ್ಥಾನ ನಮಗೆ ಬಿಟ್ಟುಕೊಡಬೇಕು, ಸಚಿವ ಸಂಪುಟದಲ್ಲಿ ಸಮವಾಗಿ ಸ್ಥಾನಗಳನ್ನು ಹಂಚಬೇಕು ಎಂದು ಪಟ್ಟು ಹಿಡಿದಿತ್ತು. ಚುನಾವಣೆಯಲ್ಲಿ 288 ಸೀಟ್ನಲ್ಲಿ ಬಿಜೆಪಿ 105 ಸ್ಥಾನ, ಶಿವಸೇನೆ 56 ಸ್ಥಾನ, ಎನ್ಸಿಪಿ 54 ಸ್ಥಾನ ಹಾಗೂ ಕಾಂಗ್ರೆಸ್ 44 ಸ್ಥಾನಗಳನ್ನು ಗಳಿಸಿತ್ತು.

ಫ್ರೆಶ್ ನ್ಯೂಸ್

Latest Posts

Featured Videos